ಭಾನುವಾರ, ಅಕ್ಟೋಬರ್ 2, 2022
20 °C

ಮಹಿಳಾ ಸಿಬ್ಬಂದಿಗೆ ವೈದ್ಯನಿಂದ ಲೈಂಗಿಕ ಕಿರುಕುಳ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಆಳಂದ ತಾಲ್ಲೂಕಿನ ಮಾದನ ಹಿಪ್ಪರಗಾ ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಆಗಿರುವ ಡಾ. ಬನ್ನಪ್ಪ ಪಾಟೀಲ ತಮಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ತನ್ನ ಬೇಡಿಕೆಗೆ ಸ್ಪಂದಿಸದಿದ್ದರೆ ಕೆಲಸದಿಂದ ವಜಾ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಆಸ್ಪತ್ರೆಯಲ್ಲಿ ಆಪ್ತ ಸಮಾಲೋಚಕಿಯಾಗಿ ಕೆಲಸ ಮಾಡುತ್ತಿರುವ ಮಹಿಳಾ ಸಿಬ್ಬಂದಿ ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

‘ಜುಲೈ 14ರಂದು ಮಧ್ಯಾಹ್ನ ಕರ್ತವ್ಯದಲ್ಲಿದ್ದಾಗ ಡಾ. ಬನ್ನಪ್ಪ ಪಾಟೀಲ ಒಪಿಡಿ ರೂಮ್‌ಗೆ ಕರೆದು ನಾನು ಕ್ವಾರ್ಟರ್ಸ್‌ನಲ್ಲಿ ಇರುತ್ತೇನೆ. ಯಾವಾಗ ಬೇಕಾದರೂ ಬರಬಹುದು ಎಂದು ಮನವೊಲಿಸಲು ಯತ್ನಿಸಿದರು. ನಂತರ ಜುಲೈ 27ರಂದು ಬೆಳಿಗ್ಗೆ ಹಾಜರಾತಿ ಪುಸ್ತಕದಲ್ಲಿ ಸಹಿ ಮಾಡಲು ಹೋದಾಗ ಕೈಹಿಡಿದು ಎಳೆದರು. ಇದನ್ನು ಪ್ರಶ್ನಿಸಿದಾಗ, ನೀನು ನನ್ನೊಂದಿಗೆ ಅಡ್ಜಸ್ಟ್ ಮಾಡಿಕೊಳ್ಳಲಿಲ್ಲ ಎಂದರೆ ಹೀಗೆ ಕಿರುಕುಳ ಕೊಡುತ್ತಲೇ ಇರುತ್ತೇನೆ. ಜಿಲ್ಲಾ ಆರೋಗ್ಯಾಧಿಕಾರಿ ನಾನು ಹೇಳಿದಂತೆ ಕೇಳುತ್ತಾರೆ. ನಿನಗೆ ಏನೂ ಮಾಡಿಕೊಳ್ಳಲು ಆಗುವುದಿಲ್ಲ ಎಂದು ಹೇಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ’ ಎಂದು ಮಹಿಳಾ ಸಿಬ್ಬಂದಿ ದೂರಿನಲ್ಲಿ ತಿಳಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆಯೇ ಬನ್ನಪ್ಪ ಪಾಟೀಲ ನಾಪತ್ತೆಯಾಗಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು