ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ: ಕೆಎಸ್‌ಆರ್‌ಪಿ ಸಿಬ್ಬಂದಿ ವಿರುದ್ಧ ಎಫ್‌ಐಆರ್

ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಆರೋಪ
Published : 1 ಅಕ್ಟೋಬರ್ 2024, 2:51 IST
Last Updated : 1 ಅಕ್ಟೋಬರ್ 2024, 2:51 IST
ಫಾಲೋ ಮಾಡಿ
Comments

ಕಲಬುರಗಿ: ಚಿಂಚೋಳಿ ತಾಲ್ಲೂಕಿನ ಯುವತಿಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೀವ ಬೆದರಿಕೆ ಹಾಕಿದ ಆರೋಪದ ಮೇಲೆ ರಾಜ್ಯ ಮೀಸಲು ಪಡೆಯ(ಕೆಎಸ್‌ಆರ್‌ಪಿ–ಫಾಲೋವರ್) ಸಿಬ್ಬಂದಿ ಯಲ್ಲಾಲಿಂಗ ಮೇತ್ರಿ ವಿರುದ್ಧ ಮಹಿಳಾ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.

ಹೈದರಾಬಾದ್‌ನಲ್ಲಿದ್ದ ಯುವತಿಯು ಸಾಮಾಜಿಕ ಜಾಲತಾಣದ ಮೂಲಕ ಯಲ್ಲಾಲಿಂಗ ಅವರಿಗೆ ಪರಿಚಯವಾದರು. ಹಲವು ದಿನಗಳು ಇಬ್ಬರೂ ಫೋನ್‌ನಲ್ಲಿ ಮಾತನಾಡಿದ್ದರು. ಮದುವೆ ಆಗುವುದಾಗಿ ನಂಬಿಸಿದ ಯಲ್ಲಾಲಿಂಗ, ಆಗಸ್ಟ್ 13ರಂದು ಯುವತಿಯನ್ನು ಕಲಬುರಗಿಗೆ ಕರೆಯಿಸಿಕೊಂಡರು. ಬಸ್ ನಿಲ್ದಾಣದ ಸಮೀಪದ ಲಾಡ್ಜ್‌ನಲ್ಲಿ ಇರಿಸಿ, ಮದುವೆ ಆಗುವುದಾಗಿ ಪುಸಲಾಯಿಸಿ ಬಲವಂತಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ದೂರು ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ ಎಸಗಿದ ಬಳಿಕ ಫೋನ್‌ ಕರೆಗಳಿಗೆ ಸರಿಯಾಗಿ ಪ್ರತಿಕ್ರಿಯಿಸಲಿಲ್ಲ. ಯುವತಿಯು ಮದುವೆ ಬಗ್ಗೆ ಪ್ರಸ್ತಾಪಿಸಿದಾಗ ‘ನಾನು ಪೊಲೀಸ್ ಇದ್ದೇನೆ, ಬೇರೆಯವರನ್ನು ಮದುವೆಯಾದರೆ ಹೆಚ್ಚಿನ ವರದಕ್ಷಿಣೆ ಸಿಗುತ್ತದೆ. ನಿನ್ನಿಂದ ಹಣ ಸಿಗಲ್ಲ. ಮನೆಯವರೂ ಒಪ್ಪುತ್ತಿಲ್ಲ’ ಎಂದು ನಿರಾಕರಿಸಿದನು. ಈ ಬಗ್ಗೆ ಯಾರಿಗಾದರೂ ಹೇಳಿದರೆ ಸಾಯಿಸುವುದಾಗಿ ಜೀವ ಬೆದರಿಕೆಯೂ ಹಾಕಿದ್ದ ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಯಲ್ಲಾಲಿಂಗ ವಿರುದ್ಧ 64, 318(ಬಿ), 351, 352 ಬಿಎನ್‌ಎಸ್ ಅಡಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT