ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

6

ಲೈಂಗಿಕ ಕಿರುಕುಳ: ಮುಖ್ಯ ಶಿಕ್ಷಕನ ಬಂಧನ

Published:
Updated:
...

ಕಲಬುರ್ಗಿ: ಏಳನೇ ತರಗತಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನಗರದ ಖಾಸಗಿ ಶಾಲೆಯ 60 ವರ್ಷದ ಮುಖ್ಯ ಶಿಕ್ಷಕ ಮಲ್ಲನಗೌಡ ಅವರನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

‘ಶುಕ್ರವಾರ ಸಂಜೆ ಶಾಲೆ ಬಿಟ್ಟ ಬಳಿಕ ಕುರ್ಚಿಗಳನ್ನು ತೆಗೆದಿಡುವ ನೆಪ ಮಾಡಿ ನಮ್ಮ ಮಗಳನ್ನು ಶಾಲೆಯಲ್ಲೇ ಉಳಿಸಿಕೊಂಡಿದ್ದಾನೆ. ಬಳಿಕ ಮೈಕೈ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದಾನೆ’ ಎಂದು ವಿದ್ಯಾರ್ಥಿನಿಯ ಪಾಲಕರು ದೂರು ದಾಖಲಿಸಿದ್ದಾರೆ.

‘ಬಾಲಕಿಯನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದ್ದಾರೆ.

‘ಆರೋಪಿ ವಿರುದ್ಧ ಪೋಸ್ಕೊ ಕಾಯ್ದೆಯಡಿ ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳ ಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !