ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಲ್ಲಾ ಪರೀಕ್ಷೆಗಳ ರದ್ದತಿಗೆ ಎಸ್‌ಎಫ್‌ಐ ಒತ್ತಾಯ

Last Updated 9 ಜುಲೈ 2020, 8:07 IST
ಅಕ್ಷರ ಗಾತ್ರ

ಕಲಬುರ್ಗಿ: ಕೊರೊನಾ ಸಾಂಕ್ರಾಮಿಕ ಸಾಕಷ್ಟು ವೇಗವಾಗಿ ಹಬ್ಬುತ್ತಿರುವುದರಿಂದ ರಾಜ್ಯ ಸರ್ಕಾರ ಎಲ್ಲ ಪದವಿ, ಸ್ನಾತಕೋತ್ತರ ಪದವಿ, ಕಾನೂನು, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್‌ ಪರೀಕ್ಷೆಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಶನ್‌ (ಎಸ್‌ಎಫ್‌ಐ) ಕಾರ್ಯಕರ್ತರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.

ಕೊರೊನಾ ಕಾಲದಲ್ಲಿ ರಾಜ್ಯದ ಜನತೆ ಹೊಟ್ಟೆ, ಬಟ್ಟೆ, ಆಶ್ರಯ ಮತ್ತು ಉದ್ಯೋಗಕ್ಕಾಗಿ ಪರದಾಡುತ್ತಾ ಆದಾಯ ಇಲ್ಲದೇ ಅತಿಯಾದ ಸಂಕಷ್ಟಕ್ಕೆ ಸಿಲುಕಿ ಸಾವು ಬದುಕಿನ ಮಧ್ಯೆ ಜೀವನ ಸಾಗಿಸುತ್ತಿದ್ದಾರೆ. ರಾಜ್ಯದ ವಿದ್ಯಾರ್ಥಿ ಸಮುದಾಯವೂ ಇದಕ್ಕೆ ಹೊರತಾಗಿಲ್ಲ. ಆದರೆ, ಆಳುವ ಸರ್ಕಾರ ಮಾತ್ರ ವಿದ್ಯಾರ್ಥಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಟೀಕಿಸಿದರು.

ಸರ್ಕಾರ 6 ತಿಂಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು. ಸೆಮಿಸ್ಟರ್‌ ಅಭಿವೃದ್ಧಿ ಶುಲ್ಕ, ಪರೀಕ್ಷಾ ಶುಲ್ಕ, ಹಾಸ್ಟೆಲ್ ಶುಲ್ಕಗಳನ್ನು ಲಾಕ್‌ಡೌನ್‌ ಸಮಯದಲ್ಲಿ ವಿದ್ಯಾರ್ಥಿಗಳಿಗೆ ವಿಧಿಸಬಾರದು. 12ನೇ ತರಗತಿಯವರೆಗೆ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನದ ಊಟವನ್ನು ನೀಡಬೇಕು. ಇಲ್ಲವೇ ಕೇರಳ ರಾಜ್ಯ ಸರ್ಕಾರದ ಮಾದರಿಯಲ್ಲಿ ಸರ್ಕಾರ ಪ್ರತಿ ವಿದ್ಯಾರ್ಥಿಗೆ ತಿಂಗಳಿಗೆ 10 ಕೆ.ಜಿ. ಉಚಿತ ಆಹಾರ ಧಾನ್ಯಗಳನ್ನು ಮುಂದಿನ 6 ತಿಂಗಳವರೆಗೆ ನೀಡಬೇಕು ಎಂದು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮೈಲಾರಿ ದೊಡ್ಮನಿ, ಕಾರ್ಯದರ್ಶಿ ಸಿದ್ದಲಿಂಗ ಪಾಳಾ, ಲಕ್ಷ್ಮಣ ಪಾಳಾ, ಅರುಣಕುಮಾರ, ವಿಶ್ವನಾಥ ರಾಗಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT