ಶಹಾಬಾದ್: ‘ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಲವು ದಶಕಗಳಿಂದ ಒಡೆದ ಮನಸ್ಸುಗಳನ್ನು ಕಟ್ಟುವ ಕೆಲಸ ಮಾಡಿದೆ. ಆದರೆ, ಇಂದು ಮುರಿಯುವ ಕೆಲಸ ನಡೆಯುತ್ತಿದೆ’ ಎಂದು ದಸಂಸ ರಾಜ್ಯ ಸಂಘಟನಾ ಸಂಚಾಲಕ ಸುರೇಶ ಮೆಂಗನ ಹೇಳಿದರು.

ನಗರದದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯು ಮೇ 1ರಂದು ನಾಲ್ಕು ದಶಕಗಳ ಜನಾಂಗಣ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಉದ್ದೇಶ ಒಳ್ಳೆದಾಗಿದ್ದರೂ ಕೆಲವು ಲೋಪದೋಷಗಳಿಂದ ದಾರಿ ತಪ್ಪುತ್ತಿದೆ’ ಎಂದರು.

‘ದಸಂಸ ಸ್ಥಳೀಯವಾಗಿ ಅನೇಕ ನಾಯಕರನ್ನು ರಾಜ್ಯಮಟ್ಟದ ನಾಯಕರನ್ನಾಗಿ ಹುಟ್ಟಿ ಹಾಕಿದೆ. ಆದರೆ, ಸಮಾವೇಶದಲ್ಲಿ ಸಂಬಂಧ ಇಲ್ಲದವರನ್ನು ಸೇರಿಸಿಕೊಂಡು ಯಾವ ಉದ್ದೇಶಕ್ಕೆ ಮಾಡುತ್ತಿದ್ದಾರೆ. ಪ್ರಾರಂಭದಿಂದ ಹೋರಾಟದಲ್ಲಿ ಭಾಗವಹಿಸಿದ ಅನೇಕರನ್ನು ಅಗೌರವ ತೋರಿಸಿರುವುದು ತೀವ್ರ ನೋವುಂಟು ಮಾಡಿದೆ’ ಎಂದರು.

‘ಪ್ರತಿ ವರ್ಷ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಜರುಗುತ್ತವೆ. ಈ ಸಮಯದಲ್ಲಿ ಸಮಾವೇಶ ಮಾಡುತ್ತಿರುವುದು ಸರಿಯಲ್ಲ. ತಪ್ಪುಗಳನ್ನು ತಿದ್ದಿಕೊಂಡು ಮುಂದೆ ಒಟ್ಟಾಗಿ ಕೆಲಸ ಮಾಡಬೇಕಾಗಿರುವುದು ಅವಶ್ಯಕತೆ ಇದೆ’ ಎಂದು ಕಿವಿಮಾತು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಭರತ ದನ್ನಾ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260501-31-1464794651

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.