ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಹಾಬಾದ್ | ಎತ್ತಿನ ಬಂಡಿ ಮೂಲಕ  ಮತದಾನ ಜಾಗೃತಿ

Published 28 ಏಪ್ರಿಲ್ 2024, 16:20 IST
Last Updated 28 ಏಪ್ರಿಲ್ 2024, 16:20 IST
ಅಕ್ಷರ ಗಾತ್ರ

ಶಹಾಬಾದ್: ಜಿಲ್ಲಾಡಳಿತ, ಜಿಲ್ಲಾ ನಗರಾಭಿವೃದ್ಧಿ ಕೋಶ ಹಾಗೂ ಜಿಲ್ಲಾ ಸ್ವೀಪ್ ಸಮಿತಿ, ನಗರಸಭೆ ಮತ್ತು ತಾಲ್ಲೂಲು ಸ್ವೀಪ್ ಸಮಿತಿ ಸಹಯೋಗದಲ್ಲಿ ನಗರದಲ್ಲಿ ಮತದಾನ ಜಾಗೃತಿ ಜಾಥಾ ಜರುಗಿತು.

‘ನಮ್ಮ ನಡೆ ಮತದಾನದ ಕಡೆ’ ಎಂಬ ಘೋಷಣೆಯೊಂದಿಗೆ ಭಾನುವಾರ ನಗರ ಪ್ರಮುಖ ಬೀದಿಗಳಲ್ಲಿ ಎತ್ತಿನ ಬಂಡಿ, ಡೊಳ್ಳು ಬಾರಿಸುವ ಮೂಲಕ ಪಾದಯಾತ್ರೆ ಮಾಡಿ ಜಾಗೃತಿ ಮೂಡಿಸಲಾಯಿತು.

ಕಾರ್ಯಕ್ರಮದಲ್ಲಿ ಪೌರಾಯುಕ್ತ ಕೆ.ಗುರುಲಿಂಗಪ್ಪ, ತಾ.ಪಂ ಇಒ ಮಲ್ಲಿನಾಥ ರಾವೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿ ಡಾ. ವಿಜಯಲಕ್ಷ್ಮೀ ಹೇರೂರ, ನಗರಸಭೆ ಅಧಿಕಾರಿಗಳಾದ ಶರಣಗೌಡ ಪಾಟೀಲ, ರಘುನಾಥ ನರಸಾಳೆ, ಸಿದ್ದಪ್ಪಾ ಸೋಂಪೂರ, ರಬ್ಬಾನಿ ಜೆ.ಇ, ಶಿವಕುಮಾರ ಜೇಟ್ಟೂರ, ಅನಿಲಕುಮಾರ ಮಾನ್ಪಡೆ, ಸಂತೋಷ, ಈರಣ್ಣ ಸಾತ್ಕೇಡ, ಶಿವರಾಜ ಇರಳ್ಳಿ ಸೇರಿದಂತೆ ನಗರಸಭೆ ಸಿಬ್ಬಂದಿ, ಪೌರಕಾರ್ಮಿಕರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT