ಶನಿವಾರ, ಮಾರ್ಚ್ 28, 2020
19 °C

ಹಿತ್ತಲ ಶಿರೂರ: ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ಜಿಲ್ಲೆಯ ಆಳಂದ ತಾಲ್ಲೂಕಿನ ನಿಂಬರ್ಗಾ ಸಮೀಪದ ಹಿತ್ತಲ ಶಿರೂರ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿ ಕಿಡಿಗೇಡಿಗಳು ದುಷ್ಕೃತ್ಯ ಎಸಗಿದ್ದಾರೆ.

ಶನಿವಾರ ರಾತ್ರಿ ಈ ಕೃತ್ಯ ನಡೆಸಿದ್ದು, ಭಾವಚಿತ್ರಕ್ಕೆ ಸಗಣಿ ಮತ್ತು ಚಪ್ಪಲಿ ಹಾಕಿರುವುದು ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದೆ. ಗಣರಾಜ್ಯೋತ್ಸವದ ಮುನ್ನಾ ದಿನವೇ ಸಂವಿಧಾನ ಶಿಲ್ಪಿಗೆ ಅವಹೇಳನ ಮಾಡಿದ್ದಾರೆ. ಈ ಕುರಿತು ಗ್ರಾಮಸ್ಥ ಅಂಬಾರಾಯ ಧೂಳಪ್ಪ ನಿಂಬರ್ಗಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು