ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಲ್ಲಿನಾಥಗೌಡ, ದಯಾನಂದರೆಡ್ಡಿಗೆ ಶಾಂತಶ್ರೀ ಪ‍್ರಶಸ್ತಿ

Published : 6 ಸೆಪ್ಟೆಂಬರ್ 2024, 13:38 IST
Last Updated : 6 ಸೆಪ್ಟೆಂಬರ್ 2024, 13:38 IST
ಫಾಲೋ ಮಾಡಿ
Comments

ಕಲಬುರಗಿ: ಇದೇ 12ರಂದು ನಗರದ ಕನ್ನಡ ಭವನದಲ್ಲಿ ನಡೆಯುವ ಶಾಂತಪ್ಪ ಪಾಟೀಲ ನರಿಬೋಳ ಅವರ 11ನೇ ಪುಣ್ಯಸ್ಮರಣೆ ಪ್ರಯುಕ್ತ ಜೇವರ್ಗಿಯ ಹಿರಿಯ ರಾಜಕಾರಣಿ ಮಲ್ಲಿನಾಥಗೌಡ ಯಲಗೋಡ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿದ ಮೆಟ್ರೊ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ದಯಾನಂದರೆಡ್ಡಿ ಡಿಗ್ಗಾವಿ ಅವರಿಗೆ ‘ಶಾಂತಶ್ರೀ ಪ್ರಶಸ್ತಿ’ ಪ್ರದಾನ ಮಾಡಲಾಗುವುದು ಎಂದು ಎಂ.ಎಸ್. ಪಾಟೀಲ ನರಿಬೋಳ ತಿಳಿಸಿದ್ದಾರೆ.

ಅಂದು ಸಂಜೆ 5ಕ್ಕೆ ನಡೆಯುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಯಾದಗಿರಿ ಜಿಲ್ಲಾ ಮಠಾಧೀಶರ ಒಕ್ಕೂಟದ ಅಧ್ಯಕ್ಷರಾದ ದೇವಪುರ ಜಡಿಶಾಂತಲಿಂಗೇಶ್ವರ ಸಂಸ್ಥಾನ ಹಿರೇಮಠ, ಸ್ಟೇಷನ್ ಬಬಲಾದ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯರು, ರುದನೂರಿನ ತೋಂಟದಾರ್ಯ ಸಿದ್ದಲಿಂಗೆಶ್ವರ ಮಠದ ಮಲ್ಲಿಕಾರ್ಜುನ ಸ್ವಾಮಿಗಳು ವಹಿಸಿಕೊಳ್ಳಲಿದ್ದಾರೆ.

ಸಚಿವ ಶರಣಬಸಪ್ಪ ದರ್ಶನಾಪುರ ಕಾರ್ಯಕ್ರಮವನ್ನು ಉದ್ಘಾಟಿಸುವರು. ನಗರ ಪೊಲೀಸ್ ಕಮಿಷನರ್ ಶರಣಪ್ಪ ಎಸ್.ಡಿ, ಬಿಜೆಪಿ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ಉದ್ಯಮಿ ಸಂತೋಷ ಬಿಲಗುಂದಿ, ಲೇಖಕಿ ಕಾವ್ಯಶ್ರೀ ಮಹಾಗಾಂವಕರ್, ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಯೋಜಕ ಚೇತನ ಗೋನಾಯಕ್, ಜೆಡಿಎಸ್ ನಾಯಕಿ ಮಹೇಶ್ವರಿ ವಾಲಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ದಯಾನಂದರೆಡ್ಡಿ
ದಯಾನಂದರೆಡ್ಡಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT