ಮಂಗಳವಾರ, ಆಗಸ್ಟ್ 3, 2021
27 °C

ಶರಣ‌ ಹಡಪದ ಅಪ್ಪಣ್ಣ ಜಯಂತಿ ಸರಳ ಅಚರಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ಶರಣ‌ ಹಡಪದ‌ ಅಪ್ಪಣ್ಣ ಅವರ 886ನೇ‌ ಜಯಂತಿ ಹಿನ್ನೆಲೆಯಲ್ಲಿ ಭಾನುವಾರ ಇಲ್ಲಿನ ಡಾ.ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಅಂತರ‌ ಕಾಪಾಡುವುದರ ಜೊತೆಗೆ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಯೋಜಿಸಿದ‌ ಕಾರ್ಯಕ್ರಮದಲ್ಲಿ ಗಣ್ಯರು ಹಡಪದ ಅಪ್ಪಣ್ಣ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ‌ ನಿರ್ದೇಶಕ ಕೊಟ್ರೇಶ ಮರಬನಳ್ಳಿ, ಎ.ಎಸ್.ಐ. ಸಲೀಂ ಪಟೇಲ್, ಹಡಪದ ಸಮಾಜದ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣ ಸಿ. ಹಡಪದ, ಮುಖಂಡರಾದ ರಮೇಶ‌ ನೀಲೂರ, ಭಗವಂತ ಹೊನ್ನಕಿರಣಗಿ, ಆನಂದ ಜೋಳಗಿ, ಮಹಾಂತೇಶ‌ ಇಸ್ಲಾಂಪುರೆ, ಅಪ್ಪಣ್ಣ‌ ಬಟಗೇರಾ, ಸಂತೋಷ ಬಗದೂರಗಿ, ಸುನೀಲ ಹಿಪ್ಪರಗಿ, ಚಂದ್ರಕಾಂತ‌ ತೊನಸನಳ್ಳಿ, ಭಾಗಣ್ಣ ಹಡಪದ ಸೇರಿದಂತೆ ಸಮಾಜದ ಮುಖಂಡರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು