ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಮಹಾದಾಸೋಹ ಸಿದ್ಧಾಂತ ಶಿರೋಮಣಿ’ ಲೋಕಾರ್ಪಣೆ

Published : 2 ಆಗಸ್ಟ್ 2023, 14:34 IST
Last Updated : 2 ಆಗಸ್ಟ್ 2023, 14:34 IST
ಫಾಲೋ ಮಾಡಿ
Comments

ಕಲಬುರಗಿ: ಶರಣಬಸವೇಶ್ವರ ದೇವಸ್ಥಾನದ ಆವರಣದಲ್ಲಿರುವ ಮಹಾದಾಸೋಹ ಮಹಾಮನೆಯಲ್ಲಿ ಮಂಗಳವಾರ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಶರಣಬಸವಪ್ಪ ಅಪ್ಪ ಅವರ ಮಹಾದಾಸೋಹ ಜೀವನ ರಚಿಸಿರುವ ‘ಮಹಾದಾಸೋಹ ಸಿದ್ಧಾಂತ ಶಿರೋಮಣಿ’ ಶೀರ್ಷಿಕೆಯ ಹಿಂದಿ ಭಾಷೆಯ ಅಭಿನಂದನ ಗ್ರಂಥ ಲೋಕಾರ್ಪಣೆಗೊಂಡಿತು.

ಸಮಾರಂಭದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್, ಶರಣಬಸವ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯ ಸದಸ್ಯೆ ದಾಕ್ಷಾಯಿಣಿ ಅಪ್ಪ, ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಸಾನ್ನಿಧ್ಯ ವಹಿಸಿದ್ದರು.

ಮುಖ್ಯ ಭಾಷಣಕಾರರಾಗಿ ಖ್ಯಾತ ಚಿಂತಕ ವಿಶ್ವಯಾತ್ರಿ ಅಲಿಗಢ್ (ಉತ್ತರ ಪ್ರದೇಶ) ಆಗಮಿಸಿದ್ದರು. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ, ಶರಣಬಸವ ವಿವಿ ಕುಲಪತಿ ಡಾ. ನಿರಂಜನ್ ವಿ. ನಿಷ್ಠಿ, ಅಭಿನಂದನ ಗ್ರಂಥದ ಪ್ರಧಾನ ಸಂಪಾದಕ  ಡಾ. ಎಸ್.ಎಂ.ಹಿರೇಮಠ, ಸಂಪಾದಕಿ ಮಂಗಲಾ ವಿ.ಕಪರೆ, ಶರಣಬಸವ ವಿವಿ ಸಮಕುಲಪತಿ ಪ್ರೊ. ವಿ.ಡಿ.ಮೈತ್ರಿ, ಕುಲಸಚಿವ ಅನಿಲ್‌ ಕುಮಾರ ಬಿಡವೆ, ಕುಲಸಚಿವ (ಮೌಲ್ಯಮಾಪನ) ಬಸವರಾಜ ಮಠಪತಿ, ಡೀನ್ ಲಕ್ಷ್ಮೀ ಪಾಟೀಲ ಮಾಕಾ ಸೇರಿದಂತೆ ಇತರ ಪ್ರಮುಖರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT