ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಣಬಸವ ವಿ.ವಿ: 29 ವಿದ್ಯಾರ್ಥಿಗಳಿಗೆ ಉದ್ಯೋಗ

Last Updated 18 ಡಿಸೆಂಬರ್ 2021, 4:45 IST
ಅಕ್ಷರ ಗಾತ್ರ

ಕಲಬುರಗಿ: ಶರಣಬಸವ ವಿಶ್ವವಿದ್ಯಾಲಯದ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ 29 ವಿದ್ಯಾರ್ಥಿಗಳು ವಿಮಾನಯಾನ, ಪ್ರಯಾಣ ಮತ್ತು ಹೋಟೆಲ್ ಉದ್ಯಮಗಳು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗ ಪಡೆದಿದ್ದಾರೆ. ರಾಜ್ಯ ಪ್ರವಾಸೋದ್ಯಮ ಇಲಾಖೆಯಲ್ಲಿ ಜಿಲ್ಲಾ ಪ್ರವಾಸೋದ್ಯಮ ಸಲಹೆಗಾರರಾಗಿ ಆಯ್ಕೆಯಾಗಿದ್ದಾರೆ.

‘ಈ ವಿದ್ಯಾರ್ಥಿಗಳ ವಾರ್ಷಿಕ ಪ್ಯಾಕೇಜ್ ₹ 2.4 ಲಕ್ಷದಿಂದ ₹ 4.5 ಲಕ್ಷ ಆಗಿದೆ. ವಿದ್ಯಾರ್ಥಿಗಳಿಗೆ ಪ್ರವಾಸೋದ್ಯಮ ಮತ್ತು ಪ್ರಯಾಣ, ಹೋಟೆಲ್ ಉದ್ಯಮ, ಹಣಕಾಸು ಮತ್ತು ವಿಮಾನ ನಿಲ್ದಾಣಗಳು ಸೇರಿದಂತೆ ವಿವಿಧ ಕೈಗಾರಿಕೆಗಳಿಗೆ ಪ್ರಾಯೋಗಿಕ ಕಾರ್ಯಯೋಜನೆಗಳಿಗೆ ನಿಯಮಿತವಾಗಿ ಕಳುಹಿಸುವ ಮೂಲಕ ಉದ್ಯಮದ ಮಾನ್ಯತೆ ಒದಗಿಸಲಾಗಿದೆ’ ಎಂದುವಿಶ್ವವಿದ್ಯಾಲಯದ ಪ್ರವಾಸೋದ್ಯಮ ಮತ್ತು ಪ್ರಯಾಣ ವಿಭಾಗದ ಚೇರಪಸರ್ನರಾದ ಡಾ.ವಾಣಿಶ್ರೀ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಪ್ರವಾಸೋದ್ಯಮ ಇಲಾಖೆಯಲ್ಲಿ ಒಂಬತ್ತು ವಿದ್ಯಾರ್ಥಿಗಳು, ಇಂಡಿಗೋ ವಿಮಾನ ಯಾನ ಸಂಸ್ಥೆಯಲ್ಲಿ ಐವರು, ಹೈದರಾಬಾದ್‍ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಒಬ್ಬ ವಿದ್ಯಾರ್ಥಿನಿ,ಟ್ರಾವೆಲ್ ಸೆಕ್ಟರ್‌ನಲ್ಲಿ ಮೇಕ್ ಮೈ ಟ್ರಿಪ್, ಗೊಗಾಗಾ ಸೇರಿದಂತೆ ಪ್ರಮುಖ ಕಂಪನಿಗಳಲ್ಲಿ ಐವರು, ಹಣಕಾಸು ವಲಯದಲ್ಲಿ ಮೂವರು, ಐಟಿ ಗ್ಲೋಬಲ್‌ನಲ್ಲಿ ಒಬ್ಬರು, ಪಾರ್ಲೆ ಅಗ್ರೋ ಇಂಡಸ್ಟ್ರೀಸ್‍ನ ಮಾರಾಟ ಮತ್ತು ಮಾರುಕಟ್ಟೆ ವಿಭಾಗದಲ್ಲಿಯೂ ಕೆಲವು ನೇಮಕಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT