ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅದ್ಧೂರಿಯಾಗಿ ದೊಡ್ಡಪ್ಪ ಅಪ್ಪ ಅವರ ಜನ್ಮದಿನಾಚರಣೆಗೆ ನಿರ್ಧಾರ

ನ 14ರಂದು ಡಾ. ಅಪ್ಪಾ, ದಾಕ್ಷಾಯಣಿ ಎಸ್. ಅಪ್ಪ, ದೊಡ್ಡಪ್ಪ ಅಪ್ಪ ಜನ್ಮದಿನ
Last Updated 8 ನವೆಂಬರ್ 2021, 6:41 IST
ಅಕ್ಷರ ಗಾತ್ರ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನದ ಮಹಾದಾಸೋಹ ಪೀಠಾಧಿಪತಿ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಡಾ.ಶರಣಬಸವಪ್ಪ ಅಪ‍್ಪ ಅವರ 87ನೇ ಜನ್ಮದಿನಾಚರಣೆ ಮತ್ತು ದಾಕ್ಷಾಯಣಿ ಎಸ್‌. ಅಪ್ಪ ಅವರ 51ನೇ ಜನ್ಮದಿನಾಚರಣೆ ಹಾಗೂ ಶರಣಬಸವೇಶ್ವರ ಸಂಸ್ಥಾನದ 9ನೇ ಪೀಠಾಧಿಪತಿ ದೊಡ್ಡಪ್ಪ ಅಪ್ಪ ಅವರ 5ನೇ ಜನ್ಮದಿನಾಚರಣೆಯನ್ನು ಶರಣಬಸವ ವಿಶ್ವವಿದ್ಯಾಲಯ ಮತ್ತು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಎಲ್ಲಾ ಶಿಕ್ಷಣ ಸಂಸ್ಥೆಗಳಿಂದ ಇದೇ ನ 14ರಂದು ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ.

ಕಲಬುರಗಿಯ ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಸಭಾಂಗಣದಲ್ಲಿ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಬಸವರಾಜ ದೇಶಮುಖ ಹಾಗೂ ಶರಣಬಸವ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ನಿರಂಜನ್ ವಿ.ನಿಷ್ಠಿ ಅವರ ಅಧ್ಯಕ್ಷತೆಯಲ್ಲಿ ಭಾನುವಾರ ಜರುಗಿದ ಸಭೆಯಲ್ಲಿ ವಿವಿಧ ಪದವಿ ಕಾಲೇಜುಗಳ ಪ್ರಾಚಾರ್ಯರು, ಶರಣಬಸವೇಶ್ವರ ವಸತಿ ಶಾಲೆ, ಅಪ್ಪಾ ಪಬ್ಲಿಕ್ ಸ್ಕೂಲ್ ಮತ್ತು ಶರಣಬಸವ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳ ಡೀನ್‌ಗಳು ಪಾಲ್ಗೊಂಡಿದ್ದರು.

ಜನ್ಮದಿನದ ಅಂಗವಾಗಿ ನವೆಂಬರ್ 10ರಿಂದ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ವಿಶ್ವವಿದ್ಯಾಲಯದಲ್ಲಿ ಐದು ದಿನಗಳ ಕಾಲ ಆಚರಿಸಲು ವಿವರಿಸಲಾಯಿತು.

ಎಲ್ಲಾ ಸಂಸ್ಥೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು, ಕಾರ್ಯಾಗಾರಗಳು, ಕವಿಗೋಷ್ಠಿಗಳು ಮತ್ತು ಕ್ರೀಡಾಕೂಟಗಳನ್ನು ಆಯೋಜಿಸುತ್ತಿವೆ. ಇದರಲ್ಲಿ ಎಲ್ಲಾ ಶಾಲಾಕಾಲೇಜುಗಳ ವಿದ್ಯಾರ್ಥಿಗಳನ್ನು ಭಾಗವಹಿಸಲು ಆಹ್ವಾನಿಸಲಾಗುತ್ತದೆ ಮತ್ತು ವಿಜೇತರಿಗೆ ನಗದು ಬಹುಮಾನ ಹಾಗೂ ಟ್ರೋಫಿಗಳನ್ನು ನೀಡಲಾಗುವುದು. ಶಿಕ್ಷಣ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ ಡಾ.ಅಪ್ಪ ಮತ್ತು ದಾಕ್ಷಾಯಣಿ ಎಸ್. ಅಪ್ಪ ಅವರ ಕೊಡುಗೆಯನ್ನು ವಿಚಾರ ಸಂಕಿರಣಗಳಲ್ಲಿ, ಕಾರ್ಯಾಗಾರಗಳಲ್ಲಿ ಮತ್ತು ಭಾಷಣ ಸ್ಪರ್ಧೆಗಳಲ್ಲಿ ಚರ್ಚಿಸಲಾಗುವುದು.

ಬಸವರಾಜಪ್ಪ ಅಪ್ಪ ಅವರ ಸ್ಮರಣಾರ್ಥ ಭವನದಲ್ಲಿ ನ 14ರಂದು ನಡೆಯಲಿರುವ ಜನ್ಮದಿನಾಚರಣೆಯ ಸಮಾರಂಭದಲ್ಲಿ ಭಾಗವಹಿಸಲಿರುವ ವಿವಿಧ ಕ್ಷೇತ್ರಗಳ ಗಣ್ಯರ ಹೆಸರುಗಳನ್ನು ನಂತರ ನಿರ್ಧರಿಸಲಾಗುವುದು ಎಂದು ಬಸವರಾಜ ದೇಶಮುಖ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT