ಭಾನುವಾರ, ಅಕ್ಟೋಬರ್ 2, 2022
19 °C

ಶರಣಬಸವೇಶ್ವರ ದರ್ಶನಕ್ಕೆ ಭಕ್ತರ ದಂಡು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಶ್ರಾವಣ ಮಾಸದ ಮೂರನೇ ಸೋಮವಾರದ ಪ್ರಯುಕ್ತ ಕಲಬುರಗಿ, ಯಾದಗಿರಿ, ಬೀದರ್ ಸೇರಿ ಹಲವು ಜಿಲ್ಲೆಗಳ ಸಾವಿರಾರು ಭಕ್ತರು ಶರಣಬಸವೇಶ್ವರ ದೇವಸ್ಥಾನಕ್ಕೆ ತೆರಳಿ, ವಿಶೇಷ ಪೂಜೆ ಸಲ್ಲಿಸಿ ದರ್ಶನ ಪಡೆದರು.

ಸ್ವಾತಂತ್ರ್ಯ ದಿನಾಚರಣೆ ಮತ್ತು ಮೂರನೇ ಸೋಮವಾರ ಒಂದೇ ದಿನ ಬಂದಿದ್ದರಿಂದ ದೇವಸ್ಥಾನ ಆವರಣದಲ್ಲಿ ದೇಶ ಭಕ್ತಿಯ ರಾಷ್ಟ್ರಧ್ವಜ ಹಿಡಿದವರು ಹಾಗೂ ದಾಸೋಹ ಕಾಯಕದ ಅಪ್ಪನ ಭಕ್ತರೂ ಸಾವಿರಾರು ಸಂಖ್ಯೆಯಲ್ಲಿ ನೆರದಿದ್ದರು.

ಬೆಳಗಿನ ಜಾವದಿಂದಲೇ ಶರಣಬಸವೇಶ್ವರರ ಕರ್ತೃ ಗದ್ದುಗೆಯ ಮೂರ್ತಿಗಳನ್ನು ಶುಚಿಗೊಳಿಸಿ, ನಾನಾ ಬಗೆಯ ಹೂಗಳಿಂದ ಅಲಂಕಾರ ಮಾಡಿ, ವಿಶೇಷ ಪೂಜೆ ನೆರವೇರಿಸಲಾಯಿತು. ಜಿಟಿಜಿಟಿ ಮಳೆಯ ಮಧ್ಯೆಯೂ ಭಕ್ತರು ದೇವಸ್ಥಾನದತ್ತ ಹೆಜ್ಜೆ ಹಾಕಿದ್ದು ಕಂಡುಬಂತು.

ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಪಲ್ಲಕ್ಕಿ ಉತ್ಸವ ಕೈಗೊಳ್ಳಲಾಯಿತು. ಪಲ್ಲಕ್ಕಿಯೊಂದಿಗೆ ಭಕ್ತರೂ ದೇವಾಲಯದ ಪ್ರದಕ್ಷಿಣೆ ಹಾಕಿ ತಮ್ಮ ಹರಕೆ ತೀರಿಸಿದರು.

ದೂರದಿಂದಲೇ ಕಾಲ್ನಡಿಗೆಯಲ್ಲಿ ಬಂದ ಭಕ್ತರು ನೈವೇದ್ಯ ಅರ್ಪಿಸಿ, ತೆಂಗಿನಕಾಯಿ ಒಡೆದು ಭಕ್ತಿ ಸಮರ್ಪಿಸಿದರು. ಭಕ್ತರಿಗೆ ದಾಸೋಹ ಮಹಾಮನೆಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು