ಸೇಡಂ: ‘ಕೇಂದ್ರ ಸರ್ಕಾರ ಬಡವರ ಪರ ಯೋಜನೆಗಳನ್ನು ಜಾರಿಗೊಳಿಸದೇ, ಶ್ರೀಮಂತರ ಪರವಾಗಿ ಆಡಳಿತ ನಡೆಸುತ್ತಿದೆ. ಬಡವರ ಬಗ್ಗೆ ಕಿಂಚಿತ್ತು ಕೇಂದ್ರ ಸರ್ಕಾರಕ್ಕೆ ಕಾಳಜಿಯಿಲ್ಲ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ದೂರಿದರು.

ಪಟ್ಟಣದ ಕೆಎನ್ಜೆಡ್ ಸಭಾಂಗಣದಲ್ಲಿ ಶುಕ್ರವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ‘ಕಳೆದ 11 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಜಾರಿಗೆ ತಂದಿರುವ ಯೋಜನೆಗಳು ಯಾವೊಂದು ಬಡವರ ಪರವಾಗಿಲ್ಲ. ಮನಮೋಹನ್ ಸಿಂಗ ಅವಧಿಯಲ್ಲಿ ಜಾರಿಗೊಳಿಸಿದ್ದ ನರೇಗಾ ಯೋಜನೆಯ ಉದ್ದೇಶವನ್ನು ಬದಲಾಯಿಸುತ್ತಿದ್ದು, ಹಲವು ಷರತ್ತುಗಳನ್ನು ಅನ್ವಯಿಸಲಾಗುತ್ತಿದೆ. ಇದರಿಂದ ದುಡಿಯುವ ವರ್ಗ ಉದ್ಯೋಗದಿಂದ ವಂಚಿತರಾಗುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದನ್ನು ದಿಟ್ಟವಾಗಿ ಎದುರಿಸುವಂತಹ ನಿರ್ಧಾರ ಕೈಗೊಳ್ಳುತ್ತಿದೆ’ ಎಂದರು.

‘ಸಂವಿಧಾನ ಪ್ರಕಾರ ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕಾದ ಚುನಾವಣಾ ಆಯೋಗ ಇಂದು ಕೇಂದ್ರ ಸರ್ಕಾರದ ಅಣತಿಯಂತೆ ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ಬಂದಿದೆ. ಚುನಾವಣಾ ಆಯೋಗದ ನೇಮಕಾತಿಯಲ್ಲಿ ಸುಪ್ರಿಂಕೋರ್ಟ್ನ ನ್ಯಾಯಾಧೀಶರನ್ನು ಕೈಬಿಟ್ಟು, ಆಡಳಿತ ಮತ್ತು ವಿರೋಧ ಪಕ್ಷಕ್ಕೆ ಮಾತ್ರ ಸೀಮಿತ ಮಾಡಿರುವುದು ಸಂವಿಧಾನ ವಿರೋಧಿ ನೀತಿಯಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಹಾಂತಪ್ಪ ಸಂಗಾವಿ, ಮಧುಸೂದನರೆಡ್ಡಿ ಪಾಟೀಲ, ಸುಭಾಷ ರಾಠೋಡ ಮಾತನಾಡಿದರು.

ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಶರಣರೆಡ್ಡಿ ಪಾಟೀಲ, ರವಿಂದ್ರ ನಂದಿಗಾಮ, ಶಂಕರ ಭೂಪಾಲ ಪಾಟೀಲ, ಹೇಮ್ಲಾನಾಯಕ, ವೆಂಕಟರೆಡ್ಡಿ ಕಡತಾಲ್, ರವಿ ಸಾಹು ತಂಬಾಕೆ ದೂಳಪ್ಪ ದೊಡ್ಡಮನಿ, ಅಬ್ದುಲ್ ಗಫೂರ, ಮಹ್ಮದ್ ಗೌಸ್, ಸತೀಶ ಪೂಜಾರಿ, ಜಗನ್ನಾಥ ಚಿಂತಪಳ್ಳಿ, ಜೈಭೀಮ ಊಡಗಿ, ಲಲಿತಾ ಯಾಕಾಪುರ, ಬಸ್ಸಮ್ಮ ಪಾಟೀಲ, ಬಾಬಾ ಲಿಂಗಂಪಲ್ಲಿ ಇದ್ದರು.

₹ 500 ಕೋಟಿ ಕಾಮಾಗಾರಿಗಳಿಗೆ ಅಡಿಗಲ್ಲು

ಉದ್ಘಾಟನಾ ಸಮಾರಂಭಕ್ಕೆ ಸಿಎಂ ಆಗಮನ ‘ವಿವಿಧ ಕಾಮಗಾರಿಗಳ ಅಡಿಗಲ್ಲು ಹಾಗೂ ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜ.12 ರಂದು ಪಟ್ಟಣಕ್ಕೆ ಆಗಮಿಸುತ್ತಿದ್ದಾರೆ. ಪಟ್ಟಣದ ತಾಲ್ಲೂಕು ಕ್ರೀಡಾಂಗಣಕ್ಕೆ ಮಧ್ಯಾಹ್ನ 2.30ಗೆ ಆಗಮಿಸಿ ಸಮಾರಂಭ ಉದ್ಘಾಟಿಸಲಿದ್ದಾರೆ’ ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಏತನೀರಾವರಿ ರಸ್ತೆಗಳ ನಿರ್ಮಾಣ ಒಳಕ್ರೀಡಾಂಗಣ ಉದ್ಘಾಟನೆ ಮಳಿಗೆಗಳು ಸೇರಿದಂತೆ ಹತ್ತು ಹಲವು ಕಟ್ಟಡ ಹಾಗೂ ಕಾಮಗಾರಿಗಳಿಗೆ ಚಾಲನೆ ಹಾಗೂ ಉದ್ಘಾಟನೆಗೊಳ್ಳಲಿವೆ. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ಸಕಲ ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು ಸಾರ್ವಜನಿಕರು ಕಾರ್ಯಕ್ರಮಕ್ಕೆ ಆಗಮಿಸಬೇಕು’ ಎಂದು ಮನವಿ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ ಉಪವಿಭಾಗಾಧಿಕಾರಿ ಪ್ರಭುರೆಡ್ಡಿ ಡಿಎಸ್ಪಿ ಸಂಗಮನಾಥ ಹಿರೇಮಠ ತಹಶೀಲ್ದಾರ್ ಶ್ರೀಯಾಂಕ ಧನಶ್ರೀ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.