ವಾಡಿ (ಕಲಬುರಗಿ ಜಿಲ್ಲೆ): ಶಿವಾಜಿ ಜಯಂತಿಯಂದು ಮೈಕ್ ಶಬ್ದಕ್ಕೆ ಸಂಬಂಧಿಸಿದಂತೆ ಗುರುವಾರ ರಾತ್ರಿ ಎರಡು ಕೋಮುಗಳ ಮಧ್ಯೆ ನಡೆದ ಘರ್ಷಣೆಯಿಂದ ರಾವೂರು ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಯಲ್ಲಿ ಕಲ್ಲು ತೂರಾಟ ನಡೆದು 5ಕ್ಕೂ ಅಧಿಕ ಜನ ಗಾಯಗೊಂಡ ಪ್ರಯುಕ್ತ, ಶನಿವಾರ ಪೊಲೀಸ್ ವರಿಷ್ಠಾಧಿಕಾರಿ ಅಡ್ಡೂರು ಶ್ರೀನಿವಾಸಲು ರಾವೂರು ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರೊಂದಿಗೆ ಚರ್ಚಿಸಿ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದರೆ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಗ್ರಾಮದ ಗೋಕುಲ ನಗರದ ಗಣೇಶ ಕಟ್ಟೆಯ ಬಳಿ ಗುರುವಾರ ರಾತ್ರಿ ಶಿವಾಜಿ ಜಯಂತಿಯಂದು ನಡೆಯುತ್ತಿದ್ದ ಮೆರವಣಿಗೆಯಲ್ಲಿ ಮೈಕ್ ಶಬ್ದ ಕಡಿಮೆ ಮಾಡುವ ವಿಷಯಕ್ಕೆ ಕೆಲ ಮುಸ್ಲಿಂ ಹಾಗೂ ಹಿಂದೂ ಯುವಕರ ಮಧ್ಯೆ ಮಾತಿನ ಚಕಮಕಿ ನಡೆದು ನೂಕಾಟ–ತಳ್ಳಾಟ ನಡೆದು ಪರಸ್ಪರ ಹೊಡೆದಾಡಿಕೊಂಡಿದ್ದಾರೆ.

ಘಟನೆಯಲ್ಲಿ 5 ಜನರು ಗಾಯಗೊಂಡರು. ಗಲಭೆ ಸುದ್ದಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿದ ವಾಡಿ ಪಿಎಸ್ಐ ತಿರುಮಲೇಶ ಕೆ. ಪರಿಸ್ಥಿತಿ ತಿಳಿಗೊಳಿಸಿದರು. ಗಾಯಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ನಂತರ ಮನೆಗೆ ಕಳುಹಿಸಲಾಯಿತು.

ಈ ಕುರಿತು ವಾಡಿ ಠಾಣೆಯಲ್ಲಿ ಮುಂಜಾಗೃತೆ ಕ್ರಮವಾಗಿ ಎರಡು ಕೋಮಿನ ಒಟ್ಟು 8 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಗ್ರಾಮದಲ್ಲಿ ಈಗ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಪೊಲೀಸರು ಬೀಡು ಬಿಟ್ಟಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.