ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಮೊರಾರ್ಜಿ ವಸತಿ ಶಾಲೆಯ ಸಿಬ್ಬಂದಿ ವಜಾಕ್ಕೆ ಆಗ್ರಹ

Published 20 ಡಿಸೆಂಬರ್ 2023, 16:08 IST
Last Updated 20 ಡಿಸೆಂಬರ್ 2023, 16:08 IST
ಅಕ್ಷರ ಗಾತ್ರ

ಕಲಬುರಗಿ: ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಮಲದ ಗುಂಡಿ ಶುಚಿಗೊಳಿಸಲು ವಿದ್ಯಾರ್ಥಿಗಳನ್ನು ಇಳಿಸಿದ ಘಟನೆ ಅತ್ಯಂತ ಅಮಾನವೀಯ ಎಂದು ಜಿಲ್ಲೆಯ ಶ್ರಮಜೀವಿಗಳ ವೇದಿಕೆ ಕಿಡಿಕಾರಿದೆ.

ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಚಂದ್ರಶೇಖರ ಎಸ್‌.ಹಿರೇಮಠ, ಶಿವಕುಮಾರ ರೇಷ್ಮಿ, ಕಲ್ಯಾಣಕರ ಎಂ.ಪಿ., ‘ಈ ಘಟನೆಯು ರಾಜ್ಯ ಸರ್ಕಾರದ ಘನತೆಗೆ ಕಳಂಕ ತಂದಿದೆ. ಹೀಗಾಗಿ ಸರ್ಕಾರವು ಆ ಶಾಲೆಯ ಶಿಕ್ಷಕರು, ಸಿಬ್ಬಂದಿಯನ್ನು ಬರೀ ಅಮಾನತುಗೊಳಿಸಿದರೆ ಸಾಲದು. ಅವರನ್ನು ಸೇವೆಯಿಂದಲೇ ವಜಾಗೊಳಿಸುವ ಮೂಲಕ ಇಂಥ ಅಮಾನವೀಯ ಕೃತ್ಯಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಗಟ್ಟಿ ಸಂದೇಶ ರವಾನಿಸಬೇಕು’ ಎಂದು ಒತ್ತಾಯಿಸಿದ್ದಾರೆ.

ಅಲ್ಲದೇ, ‘ರಾಜ್ಯದಲ್ಲಿ ಇಂಥ ಘಟನೆಗಳು ಮರುಕಳಿಸದಂತೆ ಶಿಕ್ಷಣ ಇಲಾಖೆಗೆ ಸೂಚಿಸಬೇಕು ಹಾಗೂ ಈ ನಿಟ್ಟಿನಲ್ಲಿ ಸರ್ಕಾರ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT