ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಫಜಲಪುರ | ಸೇತುವೆ ಮುಳುಗಡೆ: ಸಂಚಾರ ಅಸ್ತವ್ಯಸ್ತ

Published 7 ಜುಲೈ 2024, 16:00 IST
Last Updated 7 ಜುಲೈ 2024, 16:00 IST
ಅಕ್ಷರ ಗಾತ್ರ

ಅಫಜಲಪುರ: ತಾಲ್ಲೂಕಿನಲ್ಲಿ ಕಳೆದ ಎರಡು ದಿನಗಳಿಂದ ಧಾರಾಕಾರ ಮಳೆ ಆಗುತ್ತಿದ್ದು, ಭಾನುವಾರ ಸಿದ್ದನೂರು ಗ್ರಾಮದಿಂದ ರೇವೂರು (ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಮಳೆ ನೀರಿನಿಂದ ಮುಳುಗಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ.

‘ಹೆಚ್ಚು ಮಳೆಯಾದಾಗ ಸೇತುವೆ ತುಂಬಿ ಹರಿಯುತ್ತದೆ. ಹೀಗಾಗಿ ಸಂಚಾರ ಮಾಡಲು ಸಾಧ್ಯವಾಗುವುದಿಲ್ಲ. ಕೆಲವು ಬಾರಿ ಎರಡು ಮೂರು ದಿನ ಸೇತುವೆ ನೀರು ಕಡಿಮೆಯಾಗುವುದಿಲ್ಲ. ಹೀಗಾಗಿ ಗ್ರಾಮಸ್ಥರಿಗೆ ಬೇರೆ ಬೇರೆ ಗ್ರಾಮಗಳಿಗೆ ಸಂಚಾರ ಮಾಡಲು ತೊಂದರೆಯಾಗುತ್ತಿದೆ’ ಎಂದು ಗ್ರಾಮಸ್ಥರು ತಿಳಿಸಿದರು.

ಅದಕ್ಕಾಗಿ ಸೇತುವೆ ಎತ್ತರವನ್ನು ಹೆಚ್ಚಿಸಬೇಕು ಎಂದು ಗ್ರಾಮಸ್ಥರು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಈ ರಸ್ತೆ ಸೇತುವೆ ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಉಪ ವಿಭಾಗಕ್ಕೆ ಸೇರಿದ್ದು, ಅದಕ್ಕಾಗಿ ಎಂಜಿನಿಯರ್ ಅವರು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT