ಈ ಕುರಿತು ಪ್ರಕಟಣೆ ನೀಡಿರುವ ರಾಜ್ಯ ಕಾರ್ಯದರ್ಶಿ ಯು. ಬಸವರಾಜ ಹಾಗೂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯೆ ಹಾಗೂ ಕಲಬುರಗಿ ಜಿಲ್ಲಾ ಕಾರ್ಯದರ್ಶಿ ಕೆ. ನೀಲಾ, ‘ರಾಜ್ಯಪಾಲರೊಬ್ಬರು ಸಾಮಾನ್ಯ ಪ್ರಜೆಯೊಬ್ಬರ ಮನವಿ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡುವ ಮತ್ತು ಪ್ರಾಸಿಕ್ಯೂಷನ್‌ಗೆ ಅವಕಾಶ ನೀಡುವ ಪ್ರಜಾಪ್ರಭುತ್ವ ವಿರೋಧಿ ಬೆಳವಣಿಗೆ ಪ್ರಜಾಸತ್ತಾತ್ಮಕ ಶಕ್ತಿಗಳಲ್ಲಿ ಆತಂಕ ಮೂಡಿಸಿದೆ. ಮುಖ್ಯಮಂತ್ರಿ ಅವರು ಈಗಾಗಲೇ ಮುಡಾ ಪ್ರಕರಣಕ್ಕೆ ಸಂಬಂಧಿಸಿ ವಿಧಾನಸಭೆ ಹಾಗೂ ನೇರ ರಾಜ್ಯಪಾಲರಿಗೂ ವಿವರವಾದ ಮಾಹಿತಿ ನೀಡಿದ್ದಾರೆ.