ಕಲಬುರಗಿ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡುವ ವೇಳೆ ಜಾತಿ ಗಣತಿ ವರದಿ ಸ್ವೀಕಾರ ಮಾಡಿ ಜಾತಿ ಜಾತಿಗಳ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿದ್ದಾರೆ’ ಎಂದು ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಟೀಕಿಸಿದರು.

ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರೇ ಮಾಡಿಸಿದ್ದ ಕಾಂತರಾಜು ಆಯೋಗದ ಜಾತಿ ಗಣತಿಯಲ್ಲಿ ರಾಜ್ಯದಲ್ಲಿ ದಲಿತರು ಹೆಚ್ಚಾಗಿದ್ದಾರೆ ಎಂಬ ವರದಿ ನೀಡಿದ್ದರು. ಇದೀಗ ಸ್ವೀಕರಿಸಿದ ವರದಿಯಲ್ಲಿ ಮುಸ್ಲಿಮರು ಹೆಚ್ಚಿದ್ದಾರೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಕಾರಣವೇನು ಎಂಬುದನ್ನು ಅವರೇ ಹೇಳಬೇಕು’ ಎಂದರು.

‘ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮೇಲೂ ಕೋಮುವಾದದ ವಿರುದ್ಧ ಹೋರಾಟ ಮಾಡಲು ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಮುಖ್ಯವಾಗಿ ಕಾಂಗ್ರೆಸ್ ಪಕ್ಷವೇ ಕೋಮುವಾದಿಯಾಗಿದೆ. ಒಬಿಸಿ ಸಮುದಾಯವನ್ನು ಒಡೆಯಲು ನೋಡಿದ ಕಾಂಗ್ರೆಸ್ ವಿರುದ್ಧವೇ ಹೋರಾಟ ಮಾಡಲಿ’ ಎಂದು ಸವಾಲು ಹಾಕಿದರು.

ಬಿಜೆಪಿ ಜಿಲ್ಲಾ ನಗರ ಘಟಕದ ಅಧ್ಯಕ್ಷ ಚಂದು ಪಾಟೀಲ, ವಿಧಾನಪರಿಷತ್ ಸದಸ್ಯರಾದ ಬಿ.ಜಿ.ಪಾಟೀಲ, ಶಶೀಲ್ ಜಿ. ನಮೋಶಿ, ಮಾಜಿ ಸಂಸದ ಡಾ.ಉಮೇಶ ಜಾಧವ್ ಇತರರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-35-2033317678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.