ಮಂಗಳವಾರ, ಅಕ್ಟೋಬರ್ 26, 2021
21 °C

ಕಲಬುರಗಿ: ಸಿದ್ದರಾಮಯ್ಯಗೂ ಭೂಕಂಪನ ಅನುಭವ, ಸಭೆ ವೇಳೆಯೇ ಭೂಮಿಯಿಂದ ಶಬ್ದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಂಗಳವಾರ ರಾತ್ರಿ 8 ಗಂಟೆಯ ಸುಮಾರಿಗೆ ಚಿಂಚೋಳಿ ತಾಲ್ಲೂಕಿನ ಗಡಿಕೇಶ್ವಾರ ಗ್ರಾಮದಲ್ಲಿ ಸಭೆ ನಡೆಸುತ್ತಿದ್ದ ವೇಳೆಯೇ ಭೂಮಿಯಿಂದ ಶಬ್ದ ಕೇಳಿ ಬಂತು.

ಅಲ್ಲಿಂದಲೇ ಕಂದಾಯ ಸಚಿವ ಆರ್‌.ಅಶೋಕ್ ಅವರಿಗೆ ಕರೆ ಮಾಡಿದ ಸಿದ್ದರಾಮಯ್ಯ ಅವರು ಈ ಗ್ರಾಮಸ್ಥರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸುವಂತೆ ಸಲಹೆ ನೀಡಿದರು. 

‘ಗ್ರಾಮಸ್ಥರಿಗೆ ತಾತ್ಕಾಲಿಕವಾಗಿ ಪುನರ್ವಸತಿ ಕಲ್ಪಿಸುವ ಕೆಲಸವನ್ನು ಜಿಲ್ಲಾಧಿಕಾರಿಯೇ  ಮಾಡಬೇಕಿತ್ತು. ಅವರು ಒಂದು ಬಾರಿಯೂ ಈ ಗ್ರಾಮಕ್ಕೆ ಬಂದಿಲ್ಲ. ನಾನು ಬರುತ್ತೇನೆ ಎಂದು ತಿಳಿದ ನಂತರ ಇಲ್ಲಿಗೆ ಭೇಟಿ ನೀಡಿದ್ದಾರೆ’ ಎಂದು ಸಿದ್ದರಾಮಯ್ಯ ಹರಿಹಾಯ್ದರು.

ಕಳೆದ ಹಲವು ದಿನಗಳಿಂದ ಈ ಗ್ರಾಮದಲ್ಲಿ ಭೂಕಂಪನದ ಅನುಭವವಾಗುತ್ತಿರುವ ಬಗ್ಗೆ ವರದಿಯಾಗುತ್ತಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು