‘ಅಂತಿಮ ನಿರ್ಧಾರ ಕೇಂದ್ರದ್ದು’
ಕುರುಬ ಸಮುದಾಯವನ್ನು ಎಸ್ಟಿ ಪಟ್ಟಿಗೆ ಸೇರಿಸಲು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ವಿರೋಧ ವ್ಯಕ್ತಪಡಿಸುತ್ತಿರುವ ಕುರಿತು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ‘ಯಾವುದೇ ಸಮುದಾಯವನ್ನು ಎಸ್ಟಿಗೆ ಸೇರಿಸುವ ಅಂತಿಮ ತೀರ್ಮಾನವನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಈ ಬಗ್ಗೆ ರಾಜ್ಯ ಸರ್ಕಾರ ಕೇವಲ ಶಿಫಾರಸು ಮಾಡಬಹುದಾಗಿರುತ್ತದೆ. ಈ ಬಗ್ಗೆ ಯಾರೂ ವಿರೋಧ ವ್ಯಕ್ತಪಡಿಸುವ ಅಗತ್ಯವಿಲ್ಲ’ ಎಂದರು.