ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಅವರದ್ದು ಹಗರಣಗಳ ಸರ್ಕಾರ; ಅರುಣ್ ಸಿಂಗ್

Last Updated 29 ಸೆಪ್ಟೆಂಬರ್ 2022, 6:03 IST
ಅಕ್ಷರ ಗಾತ್ರ

ಕಲಬುರಗಿ: ‘ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುತ್ತಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರದ್ದು ಹಗರಣಗಳ ಸರ್ಕಾರವಾಗಿತ್ತು’ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ತಿರುಗೇಟು ನೀಡಿದರು.

ಸಿದ್ದರಾಮಯ್ಯ ಅವರ ಭ್ರಷ್ಟಾಚಾರದ ಆಪಾದನೆಗೆ ನಗರದಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಅವರು, ‘ನೂರು ಇಲಿಗಳನ್ನು ತಿಂದ ಬೆಕ್ಕು ಯಾತ್ರೆಗೆ ಹೊರಟಿತ್ತು ಎಂಬಂತಿದೆ ಅವರ ಆರೋಪ. ಅವರ ಸರ್ಕಾರದ ಅವಧಿಯಲ್ಲಿ ಬಡವರ ಆಹಾರ ಧಾನ್ಯ ಹಂಚಿಕೆ, ಶಿಕ್ಷಕರ ನೇಮಕಾತಿ ಸೇರಿದಂತೆ ಹಲವು ಹಗರಣಗಳು ನಡೆದಿವೆ’ ಎಂದು ದೂರಿದರು.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಸಾಮಾನ್ಯರ ಮುಖ್ಯಮಂತ್ರಿ. ಮುಖ್ಯಮಂತ್ರಿ ಹುದ್ದೆ ಮತ್ತು ರಾಜ್ಯದ ಗೌರವಕ್ಕೆ ಧಕ್ಕೆ ತರುವಂತಹ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ದೇಶದ ವಿವಿಧೆಡೆ ಕಾಂಗ್ರೆಸ್‌ನಲ್ಲಿ ಜಗಳವಾಗುತ್ತಿದೆ. ಅದೇ ಮಾದರಿಯಲ್ಲಿ ಕರ್ನಾಟಕದಲ್ಲೂ ಕಾಂಗ್ರೆಸ್ ನಾಯಕರ ನಡುವೆ ಗಲಾಟೆ ನಡೆಯಲಿದೆ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT