ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ರಾಜೀನಾಮೆಗೆ ಬಾಲರಾಜ್ ಒತ್ತಾಯ

Published : 26 ಸೆಪ್ಟೆಂಬರ್ 2024, 16:01 IST
Last Updated : 26 ಸೆಪ್ಟೆಂಬರ್ 2024, 16:01 IST
ಫಾಲೋ ಮಾಡಿ
Comments

ಕಲಬುರಗಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ ಒತ್ತಾಯ ಮಾಡಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ನಡೆಸಲು ರಾಜ್ಯಪಾಲರು ನೀಡಿರುವ ಅನುಮತಿಗೆ ರಾಜ್ಯ ಹೈಕೋರ್ಟ್ ಹಸಿರು ನಿಶಾನೆ ತೋರಿಸಿದೆ. ಅಲ್ಲದೇ, ಜನಪ್ರತಿನಿಧಿ ನ್ಯಾಯಾಲಯವೂ ಸಿಎಂ ವಿರುದ್ಧ ಎಫ್ಐಆರ್ ದಾಖಲಿಸಿ, ಮೂರು ತಿಂಗಳ ಒಳಗಾಗಿ ತನಿಖೆ ಮುಗಿಸಿ ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದೆ. ಆದ್ದರಿಂದ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ಕೂಡಲೇ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

‘ಮುಡಾ ಹಗರಣದ ಕುರಿತು ಬಿಜೆಪಿ ನಿಲುವು ಸ್ಪಷ್ಟವಿದೆ. ಈ ಹಗರಣ ಕೇವಲ 14 ನಿವೇಶನಗಳಿಗೆ ಸೀಮಿತವಲ್ಲ. ಒಂದೆಡೆ 14 ನಿವೇಶನಗಳಿದ್ದರೆ, ಇನ್ನೊಂದೆಡೆ 4 ರಿಂದ 5 ಸಾವಿರ ಕೋಟಿ ಬೆಲೆಬಾಳುವ ನಿವೇಶನಗಳು ರಿಯಲ್ ಎಸ್ಟೇಟ್, ದಲ್ಲಾಳಿಗಳ ಪಾಲಾಗಿವೆ. ಇದೆಲ್ಲವುಗಳ ಸಮಗ್ರ ತನಿಖೆ ಆಗಬೇಕು. ಇದು ಸಿಬಿಐನಿಂದ ಮಾತ್ರ ಸಾಧ್ಯ. ಆದಕಾರಣ ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು’ ಎಂದು ಒತ್ತಾಯಿಸಿದ್ದಾರೆ.

‘ನೈತಿಕತೆಯ ಪಾಠ ಮಾಡುವ ಸಿದ್ದರಾಮಯ್ಯ ಅವರು ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡಬೇಕು’ ಎಂದಿರುವ ಬಾಲರಾಜ್‌ ಅವರು, ರಾಜೀನಾಮೆ ಕೊಡದಿದ್ದರೆ ಜೆಡಿಎಸ್ ನಿರಂತರವಾಗಿ ಉಗ್ರ ಹೋರಾಟ ನಡೆಸುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT