ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರಗಿ: ಅಮೃತ್ ಯೋಜನೆಗೆ ಆರು ನಗರಗಳು ಆಯ್ಕೆ

Published 11 ಜುಲೈ 2023, 6:44 IST
Last Updated 11 ಜುಲೈ 2023, 6:44 IST
ಅಕ್ಷರ ಗಾತ್ರ

ಕಲಬುರಗಿ: ‘ಅಮೃತ್ 1.0 ಯೋಜನೆಯಡಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಇರುವ ಆರು ನಗರ ಸಭೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ’ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ ತಿಳಿಸಿದ್ದಾರೆ.

ವಿಧಾನ ಪರಿಷತ್ತಿನಲ್ಲಿ ಸೋಮವಾರ ಸದಸ್ಯ ಸುನಿಲ್ ವಲ್ಯಾಪುರೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಬೀದರ್, ಹೊಸಪೇಟೆ, ಗಂಗಾವತಿ ಮತ್ತು ರಾಯಚೂರು ನಗರಸಭೆಗಳು, ಕಲಬುರಗಿ ಮತ್ತು ಬಳ್ಳಾರಿ ಮಹಾನಗರ ಪಾಲಿಕೆಗಳು ಈ ಯೋಜನೆಗೆ ಆಯ್ಕೆಯಾಗಿವೆ’ ಎಂದಿದ್ದಾರೆ.

‘ಒಂದು ಲಕ್ಷ ಜನಸಂಖ್ಯೆಗಿಂತ ಕಡಿಮೆ ಇರುವ ಕಲಬುರಗಿ ಮತ್ತು ರಾಯಚೂರು ಜಿಲ್ಲೆಗಳ ತಲಾ 12, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ತಲಾ 7, ಕೊಪ್ಪಳದ 8 ಹಾಗೂ ಬೀದರ್‌ನ 6 ಪಟ್ಟಣ/ನಗರ ಪ್ರದೇಶಗಳನ್ನು ಆಯ್ಕೆ ಮಾಡಲಾಗಿದೆ’ ಎಂದು ಹೇಳಿದ್ದಾರೆ.

‘ಕಲಬುರಗಿ ಮಹಾನಗರದ 4,075 ಮನೆಗಳಿಗೆ 24X7 ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. 18,474 ಮನೆಗಳಿಗೆ ಒಳಚರಂಡಿ ಸಂಪರ್ಕ ಕಲ್ಪಿಸಲಾಗಿದೆ. ನಗರದಲ್ಲಿ ವಾಹನ ದಟ್ಟಣೆ ಹೆಚ್ಚಳ ಗಮನಕ್ಕೆ ಬಂದಿದ್ದು, ವಾಹನಗಳ ಓಡಾಟಕ್ಕೆ ತಕ್ಕಂತೆ ವರ್ಷ ರಸ್ತೆಗಳ ವಿಸ್ತರಣೆ ಮಾಡಲಾಗುತ್ತಿದೆ. ಮುಖ್ಯ ಹಾಗೂ ಸಂಪರ್ಕ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT