ಭಾನುವಾರ, ಸೆಪ್ಟೆಂಬರ್ 19, 2021
24 °C

ಗಡಿ ಚೆಕ್‌ಪೋಸ್ಟ್‌ಗೆ ಎಸ್‌ಪಿ ಭೇಟಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಅಫಜಲಪುರ: ಮಹಾರಾಷ್ಟ್ರ ಗಡಿಭಾಗದಲ್ಲಿ ಸಿಬ್ಬಂದಿಗಳು ಕೋವಿಡ್–19 ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿಯಮ ಉಲ್ಲಂಘನೆಗೆ ಆಸ್ಪದ ಕೊಡವಾರದು ಎಂದು  ಪೊಲೀಸ್ ವರಿಷ್ಠಾಧಿಕಾರಿ ಸಿಮಿ ಮರಿಯಮ್ಮ ಜಾರ್ಜ್ ಸೂಚಿಸಿದರು.

ತಾಲ್ಲೂಕಿನ ಬಳೂರ್ಗಿ ಗ್ರಾಮದ ಚೆಕ್‌ಪೋಸ್ಟ್‌ಗೆ ಮಂಗಳವಾರ ಭೇಟಿ ನೀಡಿ, ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳವಾಗುತ್ತಿರುವದರಿಂದ ಗಡಿಯಲ್ಲಿ ಹೆಚ್ಚಿನ ಎಚ್ಚರ ವಹಿಸಬೇಕು. ಯಾವುದೇ ವಾಹನಗಳು ಜಿಲ್ಲೆಯ ಗಡಿಯೊಳಗೆ ಬರದಂತೆ ನೋಡಿಕೊಳ್ಳಬೇಕು, ಕಡ್ಡಾಯವಾಗಿ ಆರ್‌ಟಿಪಿಸಿಆರ್ ನೆಗಟಿವ್ ವರದಿ ಇದ್ದವರಿಗೆ ಮಾತ್ರ ಗಡಿ ಒಳಗೆ ವಾಹನಕ್ಕೆ ಅವಕಾಶ ನೀಡಬೇಕು, ಅಲ್ಲದೇ ತಾಲ್ಲೂಕಿನ ಮಾಶಾಳ, ಅರ್ಜುಣಗಿ ಗ್ರಾಮದ ಚೆಕ್‌ಪೋಸ್ಟ್‌ಗಳಲ್ಲಿ ಹೆಚ್ಚಿನ ಎಚ್ಚರಿಕೆ ವಹಿಸಬೇಕು ಮತ್ತು ರಾತ್ರಿ ವೇಳೆಯಲ್ಲಿಯೂ ಜಿಲ್ಲೆ ಒಳಗೆ ಬರದಂತೆ ನೋಡಿಕೊಳ್ಳಬೇಕು ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ಸಿಪಿಐ ಜಗದೇವಪ್ಪ ಪಾಳಾ, ಪಿಎಸ್‌ಐ ವಿಶ್ವನಾಥ ಮುದರೆಡ್ಡಿ ಅವರುಗಳು ಗಡಿಯಲ್ಲಿ ಕಾಯ್ದುಕೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ತಿಳಿಸಿದರು. ಚೆಕ್‌ಪೊಸ್ಟ್‌ ಸಿಬ್ಬಂದಿಗಳಾದ ರಾಜು ಕಲ್ಯಾಣಕರ, ಸಾಗರ ಮನ್ಮಿ, ಗುಂಡಪ್ಪ ರಾಠೋಡ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.