ಕಲಬುರಗಿ: ಇಲ್ಲಿನ ಸರ್ಕಾರಿ ಮಹಾವಿದ್ಯಾಲಯದಲ್ಲಿ (ಸ್ವಾಯತ್ತ) ಮಂಗಳವಾರ ಸ್ಕೌಟ್ಸ್ ಮತ್ತು ಗೈಡ್ಸ್ ಅಡಿಯಲ್ಲಿ ‘ಪಟಾಲಂ ನಾಯಕರ ಶಿಬಿರ’ದ ಅಂಗವಾಗಿ ವಿಶೇಷ ಉಪನ್ಯಾಸವನ್ನು ಹಮ್ಮಿಕೊಳ್ಳಲಾಗಿತ್ತು.
ವಿಶೇಷ ಉಪನ್ಯಾಸ ನೀಡಿದ ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕ ಶರಣಪ್ಪ ಸೈದಾಪುರ, ವಿದ್ಯಾರ್ಥಿಗಳು ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕೆಂದು ಅಭಿಪ್ರಾಯ ಪಟ್ಟರು.
ಮುಖ್ಯ ಅತಿಥಿಯಾಗಿದ್ದ ಮುಹಮ್ಮದ್ ಯುನುಸ್ ಕೆ. ಮಾತನಾಡಿ, ವಿದ್ಯಾರ್ಥಿಗಳು ಗುರಿಯ ಸಾಧನೆಗಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸಬೇಕು ಎಂದರು.
ಅಧ್ಯಕ್ಷತೆಯನ್ನು ಸಹಾಯಕ ಪ್ರಾಧ್ಯಾಪಕ ರಾಜೇಶ ಅಜಬಸಿಂಗ್ ವಹಿಸಿದ್ದರು. ವಿಜಯಕುಮಾರ ಗೋಪಾಲೆ, ರಾಬಿಯಾ ಇಫ್ಫತ್, ಕೋತ್ಲೆ ಭೀಮರಾಯ, ಗೌಸಿಯಾ ಹಾಗೂ ಸ್ಕೌಟ್ಸ ಹಾಗೂ ಗೈಡ್ಸ್‌ಗಳ ಸ್ವಯಂ ಸೇವಕರು ಹಾಜರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.