ಸೇಡಂ: ‘ತಾಲ್ಲೂಕಿನ ಮುಧೋಳ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳು ತಾಲ್ಲೂಕುಮಟ್ಟದ ಕೊಕ್ಕೊ (ಪ್ರೌಢಶಾಲಾ ಬಾಲಕರ) ಸ್ಪರ್ಧೆಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ’ ಎಂದು ಶಾಲೆಯ ಮುಖ್ಯಶಿಕ್ಷಕ ಅನೀಲಕುಮಾರ ಸುಬೇದಾರ ತಿಳಿಸಿದ್ದಾರೆ.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ ಪ್ರೌಢಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟದಲ್ಲಿ ಹಂದರಕಿ ಗ್ರಾಮದ ಸರ್ಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳ ಜೊತೆಗೆ ಸೆಣಸಿ ವಿಜೇತರಾಗಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ಶರಣಪ್ಪ ಪರ್ಮಾ, ದೇವಿಂದ್ರಪ್ಪ ಯಾದವ, ಸಾಯಿಬಣ್ಣಾ ಪೂಜಾರಿ, ವೀರಣ್ಣಗೌಡ ಪಾಟೀಲ, ತಂಡದ ವ್ಯವಸ್ಥಾಪಕ ಮಹಾಂತೇಶ್, ಶಿಕ್ಷಕ ಸುರೇಶ, ಶಾಲಾ ಸಿಬ್ಬಂದಿ, ಮುಧೋಳ ಗ್ರಾಮಸ್ಥರು ಹರ್ಷ ವ್ಯಕ್ತಪಡಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.