ಭಾನುವಾರ, ಮೇ 29, 2022
22 °C

ಗುಲಬರ್ಗಾ ವಿಶ್ವವಿದ್ಯಾಲಯ: ಮಹಿಳಾ ಕ್ರೀಡಾಕೂಟ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ 40ನೇ ಅಂತರ ಮಹಾವಿದ್ಯಾಲಯಗಳ ಮಹಿಳಾ ಕ್ರೀಡಾಕೂಟ ಗುರುವಾರ (ಡಿ.30) ಬೆಳಿಗ್ಗೆ 9ಕ್ಕೆ ವಿಶ್ವವಿದ್ಯಾಲಯದ ಕ್ರೀಡಾಂಗಣದಲ್ಲಿ ನಡೆಯಲಿದೆ.

ವಿಶ್ವವಿದ್ಯಾಲಯದ ಕುಲಪತಿ ಪ್ರೊ. ದಯಾನಂದ ಅಗಸರ ಅವರು ಕ್ರೀಡಾಕೂಟ ಉದ್ಘಾಟಿಸುವರು. ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ ಬಸವರಾಜ ಬಿ.ಯಾದವಾಡ ಮತ್ತು ವಿದ್ಯಾ ವಿಷಯಕ ಪರಿಷತ್ ಸದಸ್ಯ ಪ್ರೊ. ಬಿ.ಎಂ.ಕನಹಳ್ಳಿ ಅವರು ಅತಿಥಿಗಳಾಗಿ ಭಾಗವಹಿಸುವರು.

ಕ್ರೀಡಾಕೂಟದಲ್ಲಿ 200 ಮಹಿಳಾ ಕ್ರೀಡಾಪಟುಗಳು ಮತ್ತು 75 ಕ್ರೀಡಾಧಿಕಾರಿಗಳು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು