ಶುಕ್ರವಾರ, ಆಗಸ್ಟ್ 19, 2022
25 °C

ಡ್ರಗ್ ದಂಧೆ ಮೂಲೋತ್ಪಾಟನೆಗೆ ಶ್ರೀರಾಮಸೇನೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರ್ಗಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಡ್ರ್ಗಗ್ಸ್ ನಂತಹ ಮಾದಕ ವಸ್ತುಗಳ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಶಿಕ್ಷಿಸುವ ಮೂಲಕ ಯುವ ಜನತೆ ದಾರಿ ತಪ್ಪುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಿದರು.

ಡ್ರಗ್ಸ್ ಮಾರಾಟ ಹಾಗೂ ಸಾಗಾಟ ಮಾಡುವವರನ್ನು ರಾಷ್ಟ್ರೀಯ ಸುರಕ್ಷತಾ ಕಾಯ್ದೆಯಡಿ ಬಂಧಿಸಲು ಅವಕಾಶ ನೀಡುವ ಕಾನೂನು ತರಬೇಕು. ಶಾಲಾ, ಕಾಲೇಜುಗಳ ಪರಿಸರದಲ್ಲಿ ಗುಪ್ತಚರ ಇಲಾಖೆಯ ಗಸ್ತು ಹೆಚ್ಚಿಸಬೇಕು. ಯಾವ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಡ್ರಗ್ಸ್ ಪತ್ತೆಯಾಗುತ್ತದೋ ಅಂತಹ ಠಾಣೆಯ ಅಧಿಕಾರಿಗಳನ್ನು ಇದಕ್ಕೆ ಹೊಣೆ ಮಾಡಬೇಕು. ಪಬ್, ಕ್ಲಬ್, ಲೈವ್ ಬ್ಯಾಂಡ್, ಸ್ಟಾರ್ ಹೋಟೆಲ್‌ಗಳಲ್ಲಿ ನಿರಂತರ ತಪಾಸಣೆ ನಡೆಸಬೇಕು ಎಂದು ಒತ್ತಾಯಿಸಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು