ಸೋಮವಾರ, 22 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಜೂನ್‌ 14ರಿಂದ ಎಸ್ಎಸ್ಎಲ್‌ಸಿ ಪರೀಕ್ಷೆ –2

ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ
Published 12 ಜೂನ್ 2024, 15:32 IST
Last Updated 12 ಜೂನ್ 2024, 15:32 IST
ಅಕ್ಷರ ಗಾತ್ರ

ಕಲಬುರಗಿ: ಜಿಲ್ಲೆಯಾದ್ಯಂತ ಎಸ್.ಎಸ್.ಎಲ್.ಸಿ–2 ಪರೀಕ್ಷೆ ಇದೇ 14ರಿಂದ 22ರವರೆಗೆ ನಡೆಯಲಿದೆ.

ಅಫಜಲಪುರ-1, ಆಳಂದ-2, ಚಿಂಚೋಳಿ-3, ಚಿತ್ತಾಪುರ-4, ಕಲಬುರಗಿ ಉತ್ತರ-5, ಕಲಬುರಗಿ ದಕ್ಷಿಣ-7, ಜೇವರ್ಗಿ-6, ಸೇಡಂ-8 ಸೇರಿದಂತೆ ಜಿಲ್ಲೆಯ ಒಟ್ಟು 60 ಕೇಂದ್ರಗಳಲ್ಲಿ ಪರೀಕ್ಷೆ ಜರುಗಲಿದೆ.

ಪರೀಕ್ಷೆಯನ್ನು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

ಪರೀಕ್ಷಾ ಸಮಯದಲ್ಲಿ ಸಂಬಂಧಪಟ್ಟ ಪರೀಕ್ಷಾ ಕೇಂದ್ರದ ಸಿಬ್ಬಂದಿ ಹೊರತುಪಡಿಸಿ, ಬೇರೆ ವ್ಯಕ್ತಿಗಳು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ಮೊಬೈಲ್ ಫೋನ್, ಬ್ಲೂಟೂತ್ ಹಾಗೂ ವೈರಲೆಸ್ ಸೆಟ್‌ಗಳು ಹಾಗೂ ಇತರ ಎಲೆಕ್ಟ್ರಾನಿಕ್ಸ್‌ ವಸ್ತುಗಳನ್ನು ಉಪಯೋಗಿಸುವುದನ್ನು ನಿಷೇಧಿಸಲಾಗಿದೆ. ಇದಲ್ಲದೇ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯ ಎಲ್ಲ ಜೆರಾಕ್ಸ್, ಪುಸ್ತಕ ಅಂಗಡಿ, ಸೈಬರ್/ ಕಂಪ್ಯೂಟರ್ ಸೆಂಟರ್‌ಗಳನ್ನು ಮುಚ್ಚುವಂತೆಯೂ ಆದೇಶಿಸಿದ್ದಾರೆ.

ರಂಜಣಗಿ: ಪಿಕೆಪಿಎಸ್‌ ಚುನಾವಣೆ 16ರಂದು

ಕಲಬುರಗಿ: ಜೇವರ್ಗಿ ತಾಲ್ಲೂಕಿನ ರಂಜಣಗಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ-2ಕ್ಕೆ ಮಾತ್ರ ಈ ಹಿಂದೆ ಹಂಚಿಕೆಯಾದ ಮತದಾರರ ಪಟ್ಟಿಯಂತೆ ಇದೇ 16ರಂದು ಬೆಳಿಗ್ಗೆ 9ರಿಂದ ಸಂಜೆ 4 ಗಂಟೆಯವರೆಗೆ ರಂಜಣಗಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತದಾನ ನಡೆಯಲಿದೆ.

ಮತದಾನ ಪ್ರಕ್ರಿಯೆ ಮುಗಿದ ನಂತರ ಮತ ಎಣಿಕೆ ಮಾಡಿ ಚುನಾವಣೆ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಚುನಾವಣೆ ಅಧಿಕಾರಿ ಆನಂದಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT