ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಳಗಿ: ಬಂದೋಬಸ್ತ್ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ

Published 25 ಮಾರ್ಚ್ 2024, 15:25 IST
Last Updated 25 ಮಾರ್ಚ್ 2024, 15:25 IST
ಅಕ್ಷರ ಗಾತ್ರ

ಕಾಳಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನ ರೇವಗ್ಗಿ, ಹೆಬ್ಬಾಳ, ಮಾಡಬೂಳ ಮತ್ತು ಕೋಡ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಿತು.

ಮೊದಲ ದಿನ ವಿದ್ಯಾರ್ಥಿಗಳು ‘ಮಾತೃಭಾಷೆ’ ವಿಷಯದ ಪರೀಕ್ಷೆ ಬರೆದರು. ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಬೆಂಚ್‌ಗಳ ವ್ಯವಸ್ಥೆ ಮಾಡಲಾಗಿತ್ತು. ಎಲ್ಲಾ ಕೇಂದ್ರಗಳ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಲಾಗಿತ್ತು. ಕಾಳಗಿ ಪಿಎಸ್ಐ ವಿಶ್ವನಾಥ ಬಾಕಳೆ, ಮಾಡಬೂಳ ಪಿಎಸ್ಐ ಅಮೋಜ ಕಾಂಬಳೆ, ರಟಕಲ್ ಪಿಎಸ್ಐ ಚಂದ್ರಶೇಖರ ಸ್ವಾಮಿ ತಮ್ಮ ವ್ಯಾಪ್ತಿಯ ಪರೀಕ್ಷಾ ಕೇಂದ್ರಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದರು.

‘ಚಿತ್ತಾಪುರ (ಚಿತ್ತಾಪುರ, ಕಾಳಗಿ, ಶಹಾಬಾದ) ಹಳೆಯ ತಾಲ್ಲೂಕಿನಲ್ಲಿ ಒಟ್ಟು 20 ಪರೀಕ್ಷಾ ಕೇಂದ್ರಗಳಿವೆ. 6254 ಪರೀಕ್ಷಾರ್ಥಿಗಳ ಪೈಕಿ 6144 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 110 ವಿದ್ಯಾರ್ಥಿಗಳು ಗೈರಾಗಿದ್ದಾರೆ. 600ಕ್ಕೂ ಹೆಚ್ಚು ಸಿಬ್ಬಂದಿ ಕರ್ತವ್ಯ ನಿರ್ವಹಿಸಿದ್ದಾರೆ’ ಎಂದು ನೋಡಲ್ ಅಧಿಕಾರಿ ವೆಂಕಟರೆಡ್ಡಿ ಕೊಲ್ಲೂರ ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಕಾಳಗಿ ತಹಶೀಲ್ದಾರ್ ಘಮಾವತಿ ರಾಠೋಡ, ಚಿತ್ತಾಪುರ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ ಸೇಡಂ ಮತ್ತಿತರ ಅಧಿಕಾರಿಗಳು ವಿವಿಧೆಡೆ ಭೇಟಿ ನೀಡಿ ಪರಿಶೀಲಿಸಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT