ಕಲಬುರಗಿ: ವಿದ್ಯಾರ್ಥಿಗಳ ಜೀವನದಲ್ಲಿ ಮಹತ್ವದ ಘಟ್ಟವಾದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲೆಯ 168 ಕೇಂದ್ರಗಳಲ್ಲಿ 46,029 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆ ಸಂದರ್ಭ ನಕಲು ತಡೆಯುವ ಉದ್ದೇಶದಿಂದ 1791 ಪರೀಕ್ಷಾ ಕೊಠಡಿಯಲ್ಲಿ ಸಿ.ಸಿ. ಟಿ.ವಿ. ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಕೇಂದ್ರದ ಮುಖ್ಯ ಅಧೀಕ್ಷಕರ ಕೊಠಡಿಯಲ್ಲಿಯೂ ಕ್ಯಾಮೆರಾ ಕಣ್ಗಾವಲು ಇರಲಿದೆ.
ಅತಿ ಹೆಚ್ಚು 10,264 ವಿದ್ಯಾರ್ಥಿಗಳು ಕಲಬುರಗಿ ಉತ್ತರ ವಿಭಾಗದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಅತಿ ಕಡಿಮೆ 3433 ವಿದ್ಯಾರ್ಥಿಗಳು ಸೇಡಂ ತಾಲ್ಲೂಕಿನಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಸುಸೂತ್ರವಾಗಿ ನಡೆಸಲು 3135 ಪರೀಕ್ಷಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಡಿಡಿಪಿಐ ಸಕ್ರೆಪ್ಪಗೌಡ ಬಿರಾದಾರ ತಿಳಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.