ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲಬುರ್ಗಿಗೆ ಸೋಮವಾರ ಬಂದಿಳಿದ ಸ್ಟಾರ್ ಏರ್ ವಿಮಾನ

ಲಾಕ್‌ ಡೌನ್‍ನಿಂದ ಸ್ಥಗಿತಗೊಂಡಿದ್ದ ವಿಮಾನಯಾನ ಪುನರಾರಂಭ
Last Updated 25 ಮೇ 2020, 7:52 IST
ಅಕ್ಷರ ಗಾತ್ರ

ಕಲಬುರ್ಗಿ: ಲಾಕ್‌ಡೌನ್ ಕಾರಣ ಕಳೆದ ಎರಡು ತಿಂಗಳಿನಿಂದ ಸ್ಥಗಿತಗೊಂಡಿದ್ದ ದೇಶಿ ವಿಮಾನಯಾನ ಸಂಚಾರ ಪುನರಾರಂಭಗೊಂಡಿದ್ದು, ಸೋಮವಾರ ಬೆಂಗಳೂರಿನಿಂದ ಸ್ಟಾರ್ ಏರ್ ಸಂಸ್ಥೆಯ ವಿಮಾನವು ಲಾಕ್‌ಡೌನ್‌ ನಂತರ ಪ್ರಥಮ ಬಾರಿಗೆ ಕಲಬುರ್ಗಿ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು.

ಬೆಳಿಗ್ಗೆ 8-40 ಗಂಟೆಗೆ 25 ಜನ ಯಾತ್ರಿಕರನ್ನು ಕರೆದುಕೊಂಡು ಹೊರಟ ವಿಮಾನ 9.30 ಗಂಟೆಗೆ ಕಲಬುರ್ಗಿಯಲ್ಲಿ ಲ್ಯಾಂಡ್ ಮಾಡಿತು. ತದನಂತರ 10.20 ಗಂಟೆಗೆ ಇಲ್ಲಿಂದ 20 ಪ್ರಯಾಣಿಕರನ್ನು ಕರೆದುಕೊಂಡು ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಿತು.

ದೇಶದೊಳಗೆ ವಿಮಾನಯಾನ ಸೇವೆಗೆ ಕೆಲ ದಿನಗಳ ಹಿಂದೆ ವಿಮಾನಯಾನ ಸಚಿವಾಲಯ ಹಸಿರು ನಿಶಾನೆ ತೋರಿದ ಪರಿಣಾಮ ಸೋಮವಾರದಿಂದ (ಮೇ-25) ದೇಶದಾದ್ಯಂತ ಕೊರೋನಾ ಹರಡದಂತೆ ಸುರಕ್ಷತಾ ಕ್ರಮದೊಂದಿಗೆ ವಿಮಾನಯಾನ ಸಂಚಾರವು ಆರಂಭಗೊಂಡಿದೆ.

ಭಾರತೀಯ ವಿಮಾನಯಾನ ಪ್ರಾಧಿಕಾರದ ಮಾರ್ಗಸೂಚಿಯಂತೆ ಕಲಬುರಗಿ ವಿಮಾನ ನಿಲ್ದಾಣದಿಂದ ಹೋಗುವ ಎಲ್ಲಾ ಪ್ರಯಾಣಿಕರಿಗೆ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ. ಪ್ರತಿ ಪ್ರಯಾಣಿಕನಿಂದ ಅರೋಗ್ಯದ ಬಗ್ಗೆ ಸ್ವಯಂ ದೃಢೀಕರಣ ಪಡೆದುಕೊಳ್ಳಲಾಗುತ್ತಿದೆ. ಆರೋಗ್ಯ ಸೇತು ಆ್ಯಪ್ ಪ್ರದರ್ಶಿಸುವುದು ಕಡ್ಡಾಯವಾಗಿದೆ. ಪ್ರಯಾಣಿಕರ ಲಗೇಜ್‍ಗಳನ್ನು ಡಿಸಿನ್ಫೆಕ್ಟ್ ಮಾಡಿಯೇ ವಿಮಾನಕ್ಕೆ ಹತ್ತಿಸಲಾಗುತ್ತದೆ. ಇನ್ನು ಬೆಂಗಳೂರಿನಿಂದ ಬರುವ ಪ್ರಯಾಣಿಕರಿಗೂ ಸ್ಕ್ರೀನಿಂಗ್ ಮಾಡಲಾಗುವುದಲ್ಲದೆ ಎಲ್ಲರ ವಿವರವನ್ನು ಆರೋಗ್ಯ ಇಲಾಖೆಯ ಸಿಬ್ಬಂದಿ ಮಾಹಿತಿ ಪಡೆಯುತ್ತಿದ್ದಾರೆ ಎಂದು ಕಲಬುರಗಿ ವಿಮಾನ ನಿಲ್ದಾಣದ ಎ.ಎ.ಐ. ನಿರ್ದೇಶಕ ಜ್ಣಾನೇಶ್ವರ ರಾವ್ ತಿಳಿಸಿದರು.

ಸ್ಟಾರ್ ಏರ್ ಸಂಸ್ಥೆಯು ತನ್ನ ವಿಮಾನ ಸಂಚಾರ ಸೇವೆ ಅರಂಭಿಸಿದ್ದು, ಅಲಯನ್ಸ್ ಏರ್ ಸಹ ಶೀಘ್ರದಲ್ಲಿಯೆ ಸೇವೆ ಆರಂಭಿಸಲಿದೆ ಎಂದು ಜ್ಣಾನೇಶ್ವರ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT