ಸೋಮವಾರ, ಆಗಸ್ಟ್ 10, 2020
22 °C

ಕೋವಿಡ್‌ ನಿಯಂತ್ರಣ ಮಾಡದ ಸರ್ಕಾರ: ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ: ‘ರಾಜ್ಯದಲ್ಲಿ ಕೋವಿಡ್ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದ್ದು, ಇದರ ನಿಯಂತ್ರಣಕ್ಕೆ ಅಗತ್ಯ ವೈದ್ಯರ ತಂಡ, ಆರೋಗ್ಯ ಸಿಬ್ಬಂದಿ ಹಾಗೂ ಹಾಸಿಗೆಗಳನ್ನು ಸಿದ್ಧಪಡಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಎಡವವಿದೆ. ಇದರಿಂದ ಜನರನ್ನು ಆತಂಕ್ಕೆ ತಳ್ಳಿದೆ’ ಎಂದು ಎಸ್.ಯು.ಸಿ.ಐ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಕಾರ್ಯದರ್ಶಿ ಎಚ್. ವಿ. ದಿವಾಕರ್ ದೂರಿದ್ದಾರೆ.

‘ಸೋಂಕು ಹತೋಟಿಗೆ ತಂದು ಜನರನ್ನು ಕಾಪಾಡಬೇಕಾದ ಸರ್ಕಾರವೇ ಸುಮಾರು ₹ 2 ಸಾವಿರ ಕೋಟಿಯಷ್ಟು ಹಗರಣ ಮಾಡಿದೆ. ಇದು ನಾಚಿಕೆಗೇಡಿನ ಸಂಗತಿ’ ಎಂದೂ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರಿಗೆ ಉಚಿತ ಚಿಕಿತ್ಸೆ ನೀಡಲು ಅನುವಾಗುವಂತೆ, ಖಾಸಗಿ ಆಸ್ಪತ್ರೆಗಳ ಸಮಸ್ಯೆಗಳನ್ನು ಪರಿಹರಿಸುವ ಅಧಿಕಾರವುಳ್ಳ ಉನ್ನತ ಸಮಿತಿ ರಚಿಸಬೇಕು, ಕ್ಯಾನ್ಸರ್, ಹೃದ್ರೋಗ, ಕಿಡ್ನಿ ಸಮಸ್ಯೆ ಮುಂತಾದ ಕಾಯಿಲೆ ಉಳ್ಳವರಿಗೆ ಮತ್ತು ಹೆರಿಗೆಗೆ ಬರುವವರಿಗೆ ಯಾವುದೇ ಅಡ್ಡಿಯಾಗದಂತೆ ಒಂದು ಪ್ರೊಟೋಕಾಲ್ ಜಾರಿಗೆ ತರಬೇಕು, 50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ಮತ್ತು ಇತರ ಇಲಾಖೆಗಳ ನೌಕರರಿಗೆ ಮನೆಯಿಂದಲೇ ಕೆಲಸ ನಿರ್ವಹಿಸಲು ಅವಕಾಶ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

‘ರೋಗಿಗಳನ್ನು ಸಾಗಿಸಲು ಬೇಕಾದಷ್ಟು ಆಂಬುಲೆನ್ಸ್‌ಗಳನ್ನು ವಿವಿಧ ಮೂಲಗಳಿಂದ ರಾಜ್ಯದಾದ್ಯಂತ ಸಿದ್ಧಪಡಿಸಿಕೊಳ್ಳಬೇಕು, ಸ್ವಚ್ಛತಾ ನೌಕರರು ಸೇರಿದಂತೆ ಕೋವಿಡ್ ನಿಯಂತ್ರಣದಲ್ಲಿ ಹೋರಾಡುತ್ತಿರುವ ಎಲ್ಲಾ ಮುಂಚೂಣಿ ಯೋಧರಿಗೆ ಅವಶ್ಯಕತೆ ಇರುವಷ್ಟು ಸುರಕ್ಷತಾ ಸಾಧನಗಳನ್ನು ಒದಗಿಸಬೇಕು, ವೇತನ ಹೆಚ್ಚಳ, ಕಾಯಂ ಮಾಡುವಂತಹ ಅವರ ಎಲ್ಲ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಬೇಕು’ ಎಂದೂ ಅವರು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು