ಅಫಜಲಪುರ: ಕಲ್ಯಾಣ ಕರ್ನಾಟಕ ಕ್ಷೇತ್ರದ ಅಂಗವಿಕಲರ ಸೇವಾ ಹಾಗೂ ಅಭಿವೃದ್ಧಿ ಟ್ರಸ್ಟ್ ವತಿಯಿಂದ ಶನಿವಾರ (ಜು.19) ಪಟ್ಟಣದ ಹಿಂಗುಲಾಂಬಿಕಾ ಕಲ್ಯಾಣ ಮಂಟಪದಲ್ಲಿ ಟ್ರಸ್ಟ್ನ 10ನೇ ವಾರ್ಷಿಕೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಪ್ರಯುಕ್ತ ವಿಶೇಷ ಚೇತನರಿಗೆ ರಾಜ್ಯ ಮಟ್ಟದ ಜಾನಪದ ಸಂಗೀತ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಸಿದ್ದರಾಮ ಸೀತನೂರ ತಿಳಿಸಿದ್ದಾರೆ.

ಹತ್ತನೇ ತರಗತಿಯಲ್ಲಿ ಅತ್ಯುತ್ತಮ ಅಂಕ ಪಡೆದ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯದ ಅಂಧ ವಿದ್ಯಾರ್ಥಿಗಳು ಹಾಗೂ ಸಾಮಾನ್ಯ ವಿದ್ಯಾರ್ಥಿಗಳಿಗೆ ಪುರಸ್ಕಾರ ನೀಡಲಾಗುವುದು. ಶಾಸಕ ಎಂ.ವೈ. ಪಾಟೀಲ ಉದ್ಘಾಟಿಸುವರು. ತಾಲ್ಲೂಕು ವಕೀಲರ ಸಂಘದ ಮಾಜಿ ಅಧ್ಯಕ್ಷ ಎಂ.ಎಲ್.ಪಟೇಲ್ ಅಧ್ಯಕ್ಷತೆ ವಹಿಸುವರು. ತಹಶೀಲ್ದಾರ್ ಸಂಜೀವಕುಮಾರ ದಾಸರ, ಮುಖಂಡರಾದ ಮತೀನ್ ಪಟೇಲ್, ಸಾದಿಕ್ ಹುಸೇನಖಾನ, ಪಿಎಸ್ಐ ಸೋಮಲಿಂಗ ಒಡಿಯಾರ ಪಾಲ್ಗೊಳ್ಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.