ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಶಿವಕುಮಾರ್ ಕಾರಿಗೆ ಕಲ್ಲೆಸೆತ ಪ್ರಜಾಪ್ರಭುತ್ವ ವಿರೋಧಿ ನಡೆ: ಸಿದ್ದರಾಮಯ್ಯ

Last Updated 30 ಮಾರ್ಚ್ 2021, 6:24 IST
ಅಕ್ಷರ ಗಾತ್ರ

ಕಲಬುರ್ಗಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಕಾರಿಗೆ ಬೆಳಗಾವಿಯಲ್ಲಿ ಶಾಸಕ ರಮೇಶ ಜಾರಕಿಹೊಳಿ ಬೆಂಬಲಿಗರು ಕಲ್ಲೆಸೆದಿರುವುದು ಪ್ರಜಾಪ್ರಭುತ್ವ ‌ವಿರೋಧಿ ನಡೆ ಎಂದು ವಿಧಾನಸಭೆ ವಿರೋಧ ಪಕ್ಷದ ‌ನಾಯಕ ಸಿದ್ದರಾಮಯ್ಯ ‌ಟೀಕಿಸಿದರು.

ಬಸವ ಕಲ್ಯಾಣ‌ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಲ್ಲಮ್ಮ (ಮಾಲಾ) ನಾರಾಯಣರಾವ್ ಪರ ಪ್ರಚಾರಕ್ಕೆ ತೆರಳುವುದಕ್ಕೂ ಮುನ್ನ ನಗರದಲ್ಲಿ ‌ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ಸಿ.ಡಿ. ಪ್ರಕರಣಕ್ಕೆ‌ ಸಂಬಂಧಿಸಿದ ಪ್ರಕರಣ ತನಿಖೆ ಕಾನೂನು ಬದ್ದವಾಗಿ ನಡೆಯಬೇಕು ‌ಎಂದು ಅಗ್ರಹಿಸಿದ್ದೆ. ಹೈಕೋರ್ಟ್ ಮುಖ್ಯ‌ ನ್ಯಾಯಮೂರ್ತಿ ಅವರ ಉಸ್ತುವಾರಿಯಲ್ಲೇ‌ ನಡೆಯಬೇಕು ಎಂದು ಒತ್ತಾಯಿಸಿದ್ದೆ. ಸಂತ್ರಸ್ತ ಯುವತಿಯೇ ನ್ಯಾಯಮೂರ್ತಿಗಳಿಗೆ ಪತ್ರ ‌ಬರೆದಿದ್ದಾಳೆ ಎಂದರು.

ಬಸವಕಲ್ಯಾಣದಲ್ಲಿ ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅದು ಬಿಜೆಪಿ ಮತ್ತು ಜೆಡಿಎಸ್ ಹುನ್ನಾರ.ಬಿಜೆಪಿ ಮತ್ತು ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ ಎಂದು ‌ಪುನರುಚ್ಚರಿಸಿದರು.

ಕೊರೊನಾ ನಿಯಂತ್ರಣಕ್ಕೆಕಠಿಣವಾದ ಕ್ರಮ ಕೈಗೊಳ್ಳಬೇಕು.ಪ್ರತಿ ದಿನ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿವೆ. ಕಠಿಣ ಕ್ರಮ ಕೈಗೊಳ್ಳದಿದ್ದರೆ ಕೊರೊನಾ ಪ್ರಕರಣಗಳು ಮತ್ತಷ್ಟು ಹೆಚ್ಚಾಗುವ ಅಪಾಯವಿದೆ ಎಂದು ‌ಅತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT