ಕಲಬುರಗಿ: ಇಲ್ಲಿನ ಸೇಡಂ ರಸ್ತೆಯ ಬನದೇಶ್ವರ ನಗರದ ಮಹಾತ್ಮ ಬನದೇಶ್ವರ ದೇವಸ್ಥಾನದ ನೂತನ ಗೋಪುರಕ್ಕೆ ಗುರುವಾರ ವಿವಿಧ ಮಠಾಧೀಶರು ಹಾಗೂ ಭಕ್ತರ ಸಮ್ಮುಖದಲ್ಲಿ ಕಳಸಾರೋಹಣ ನೆರವೇರಿಸಲಾಯಿತು.

ಕಾರ್ಯಕ್ರಮಕ್ಕೂ ಮುನ್ನ ದೇವಸ್ಥಾನದಲ್ಲಿ ಬನದೇಶ್ವರ ಮೂರ್ತಿ ಹಾಗೂ ನೂತನ ಕಳಸಕ್ಕೆ ಮಹಾ ರುದ್ರಾಭಿಷೇಕ ಮತ್ತು ಮಹಾಮಂಗಳಾರತಿ ನಡೆಯಿತು.

ಧರ್ಮಸಭೆಗೆ ಶಾಸಕ ಅಲ್ಲಮಪ್ರಭು ಪಾಟೀಲ ಹಾಗೂ ವಿವಿಧ ಮಠಾಧೀಶರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

ಶ್ರೀನಿವಾಸ ಸರಡಗಿಯ ಹುಚ್ಚೇಶ್ವರ ಹಿರೇಮಠದ ವೀರಭದ್ರ ಶಿವಾಚಾರ್ಯರು ಹಾಗೂ ಪಾಳಾದ ಗುರುಮೂರ್ತಿ ಶಿವಾಚಾರ್ಯರು ಧರ್ಮೋಪದೇಶ ನೀಡಿದರು.

ಕಡಗಂಚಿಯ ಶಾಂತಲಿಂಗೇಶ್ವರ ಮಠದ ವೀರಭದ್ರ ಶಿವಾಚಾರ್ಯರು, ಹೊನ್ನಕಿರಣಗಿಯ ರಾಚೋಟೇಶ್ವರ ಮಠದ ಚಂದ್ರಗುಂಡ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ವೀರಭದ್ರ ಶಿವಾ ಚಾರ್ಯರು, ಪಾಳಾದ ಗುರುಮೂರ್ತಿ ಶಿವಾಚಾರ್ಯರು, ಶ್ರೀನಿವಾಸ ಸರಡಗಿಯ ಚಿಕ್ಕವೀರೇಶ್ವರ ಮಠದ ರೇವಣಸಿದ್ದ ಶಿವಾಚಾರ್ಯರು, ಬನದೇಶ್ವರ ದೇವಸ್ಥಾನ ಸಂಸ್ಥಾಪಕ ಭದ್ರಯ್ಯ ಸ್ವಾಮಿ ಸಾಲಿಮಠ, ಶಿವಯೋಗಿ ಬಿ. ಮಠಪತಿ ಹಾಗೂ ಇತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-34-104071705

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.