ಕಲಬುರಗಿಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ಚಿಕಿತ್ಸೆ ಫಲಿಸದೆ ಸಾವು
ಕಲಬುರಗಿ: ಹಾಡಹಗಲೇ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿ ಮಹಮ್ಮದ್ ಮುದ್ದಸೀರ್(19) ಎಂಬಾತ ಮಂಗಳವಾರ ತಡ ರಾತ್ರಿ ಮೃತಪಟ್ಟಿದ್ದಾರೆ.
ಮಂಗಳವಾರ ಸಂಜೆ ಛೋಟಾ ರೋಜಾ ಬಡಾವಣೆಯ ಬೌವುಲಿ ಗಲ್ಲಿಯ ಅಮಿರ್ ಗುಲಶನ್ ಫಂಕ್ಷನ್ ಹಾಲ್ ಸಮೀಪ ಮಹಮ್ಮದ್ ಮುದ್ದಸೀರ್ ಮೇಲೆ ಆರೋಪಿಗಳು ಮಾರಾಕಾಸ್ತ್ರದಿಂದ ದಾಳಿ ಮಾಡಿ, ಕೊಚ್ಚಿ ಪರಾರಿಯಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ತೀವ್ರವಾಗಿ ಗಾಯಗೊಂಡು ರಕ್ತದ ಮಡುವಿನಲ್ಲಿ ಬಿದ್ದಿದ್ದ ಮುದ್ದಸೀರ್‌ನನ್ನು ನಗರದ ಮಣೂರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೆ ತಡ ರಾತ್ರಿ ಮೃತಪಟ್ಟಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.