ಮಂಗಳವಾರ, ನವೆಂಬರ್ 19, 2019
22 °C

ನೃತ್ಯ ಮಾಡುವಾಗಲೇ ಕುಸಿದ ವಿದ್ಯಾರ್ಥಿನಿ

Published:
Updated:

ಕಲಬುರ್ಗಿ: ಇಲ್ಲಿನ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ನಡೆಯುತ್ತಿರುವ ಅಂತರಕಾಲೇಜು ಯುವಜನೋತ್ಸವದಲ್ಲಿ ಲಂಬಾಣಿ ನೃತ್ಯ ಮಾಡುತ್ತಿದ್ದ ವಿದ್ಯಾರ್ಥಿನಿ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾಳೆ.

ರಾಯಚೂರು ಜಿಲ್ಲೆ ಲಿಂಗಸುಗೂರಿನ ಎಸ್.ಎಂ.ಎಲ್‌.ಬಿ. ಕಾಲೇಜಿನಲ್ಲಿ ಬಿ.ಎ. ಓದುತ್ತಿರುವ ಪ್ರಿಯಾಂಕಾ ಅಸ್ವಸ್ಥಗೊಂಡ ವಿದ್ಯಾರ್ಥಿನಿ.

ವಿ.ವಿ.ಯ ಡಾ.ಬಿ.ಆರ್.ಅಂಬೇಡ್ಕರ್‌ ಸಭಾಂಗಣದಲ್ಲಿ ನಡೆದ ಸಾಂಪ್ರದಾಯಿಕ ನೃತ್ಯ ಸ್ಪರ್ಧೆಯಲ್ಲಿ ಪ್ರಿಯಾಂಕ ನೃತ್ಯ ಮಾಡುವಾಗ ಕುಸಿದಳು. 

ಪ್ರಜ್ಞೆ ಕಳೆದುಕೊಂಡ ವಿದ್ಯಾರ್ಥಿನಿಯನ್ನು ತಕ್ಷಣವೇ ಕಲಬುರ್ಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಆಸ್ಪತ್ರೆಗೆ ಗುಲಬರ್ಗಾ ವಿ.ವಿ. ಪ್ರಭಾರ ಕುಲಪತಿ ಪ್ರೊ. ಪರಿಮಳಾ ಅಂಬೇಕರ್ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಪ್ರತಿಕ್ರಿಯಿಸಿ (+)