ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿ ವೇತನ ಕಡಿತ ಖಂಡಿಸಿ ಪ್ರತಿಭಟನೆ

ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯಿಂದ ಜಿಲ್ಲಾಧಿಕಾರಿಗೆ ಮನವಿ
Last Updated 8 ನವೆಂಬರ್ 2019, 10:20 IST
ಅಕ್ಷರ ಗಾತ್ರ

ಕಲಬುರ್ಗಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಮಂಜೂರಾತಿಗೆ ಹೊಸ ವಿದ್ಯಾರ್ಥಿಗಳನ್ನು ಪರಿಗಣಿಸಿಲಾಗುವುದಿಲ್ಲ ಎಂದು ಆದೇಶ ಹೊರಡಿಸಿದ್ದನ್ನು ಖಂಡಿಸಿ ವಿದ್ಯಾರ್ಥಿಗಳು ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆಯ (ಎಐಡಿಎಸ್‌ಒ) ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಈ ಹಿಂದೆ 2ರಿಂದ 10ನೇ ತರಗತಿಯವರೆಗೂ ಎಲ್ಲಾ ವಿದ್ಯಾರ್ಥಿಗಳಿಗೆ ಬಿಸಿಎಂ ಇಲಾಖೆಯಿಂದ ವಿದ್ಯಾರ್ಥಿ ವೇತನ ದೊರೆಯುತ್ತಿತ್ತು. ಆದರೆ ಈ ನೂತನ ಆದೇಶದಂತೆ ಅನುದಾನ ಕೊರತೆಯ ನೆಪವೊಡ್ಡಿ, ವಿದ್ಯಾರ್ಥಿ ವೇತನವನ್ನು ಕಡಿತಗೊಳಿಸಿರುವ ಸರ್ಕಾರದ ನಿರ್ಧಾರವು ವಿದ್ಯಾರ್ಥಿಗಳನ್ನು ವಂಚಿಸುವಂತಿದೆ.ಅಂತೆಯೇ, ಮುಂದಿನ ಶೈಕ್ಷಣಿಕ ಸಾಲಿನಿಂದ ಅಲೆಮಾರಿ ಮತ್ತು ಅರೆ ಅಲೆಮಾರಿ ವಿದ್ಯಾರ್ಥಿಗಳನ್ನು ಹೊರತುಪಡಿಸಿ 8ರಿಂದ 10ನೇ ತರಗತಿ ವಿದ್ಯಾರ್ಥಿಗಳನ್ನು ಅದರಲ್ಲೂ ನವೀಕರಣಗೊಂಡ ವಿದ್ಯಾರ್ಥಿಗಳನ್ನು ಮಾತ್ರ ಪರಿಗಣಿಸಬೇಕೆಂದು ತೀರ್ಮಾನಿಸಿದೆ. ಇದು ಅತ್ಯಂತ ಅಪ್ರಜಾತಾಂತ್ರಿಕ ನಿಲುವು’ ಎಂದುಎಐಡಿಎಸ್‍ಒ ವಿದ್ಯಾರ್ಥಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಹಣಮಂತ ಎಸ್.ಎಚ್. ಪ್ರತಿಭಟನಾಕಾರರು ಟೀಕಿಸಿದರು.

‘ಅನುದಾನದ ಕೊರತೆ ಇದ್ದರೆ, ಅದನ್ನು ಹೆಚ್ಚಿಸಬೇಕೇ ಹೊರತು ವಿದ್ಯಾರ್ಥಿ ವೇತನ ತಡೆಹಿಡಿಯುವುದು ತರವಲ್ಲ. ಅಲ್ಲದೇ ಪ್ರಸಕ್ತ ಕಾಲದಲ್ಲಿ ಅಸಂಖ್ಯಾತ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೇಲೆಯೇ ಅವಲಂಬಿತರಾಗಿರುತ್ತಾರೆ. ಸರ್ಕಾರದ ಈ ಧೋರಣೆಯು ವಿದ್ಯಾರ್ಥಿಗಳನ್ನು ಶಿಕ್ಷಣದಿಂದಲೇ ವಂಚಿತರನ್ನಾಗಿ ಮಾಡುತ್ತದೆ. ಕೂಡಲೇ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು’ ಎಂದು ಒತ್ತಾಯಿಸಿದರು.

ಸರ್ದಾರ್‌ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಾರ್ಯಾಲಯದವರೆಗೆ ಪ್ರತಿಭಟನೆ ನಡೆಸಲಾಯಿತು. ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷರಾದ ಸ್ನೇಹಾ ಕಟ್ಟಿಮನಿ, ಸಂಘಟನಾಕಾರರಾದ ಗೋದಾವರಿ, ಶಿಲ್ಪಾ ಬಿ.ಕೆ., ಹರೀಶ, ಪ್ರೀತಿ, ರೇವಣಸಿದ್ಧ, ಕರ್ಣ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT