ಕಲಬುರ್ಗಿ: ಪದವಿ, ಸ್ನಾತಕೋತ್ತರ ಹಾಗೂ ಡಿಪ್ಲೊಮಾ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದುಪಡಿಸುವಂತೆ ಒತ್ತಾಯಿಸಿ ಅಖಿಲ ಭಾರತ ಡೆಮಾಕ್ರಟಿಕ್ ವಿದ್ಯಾರ್ಥಿಗಳ ಸಂಘಟನೆಯ (ಎಐಡಿಎಸ್‌ಒ) ಸದಸ್ಯರು ಮಂಗಳವಾರ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಗುಲಬರ್ಗಾ ವಿಶ್ವವಿದ್ಯಾಲಯ ಮುಖ್ಯದ್ವಾರದಿಂದ ಕಾರ್ಯಸೌಧದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಒಂದೇ ತಿಂಗಳಲ್ಲಿ ಎರಡು ಸೆಮಿಸ್ಟರ್‌ಗಳ ಪರೀಕ್ಷೆ ನಡೆಸಬಾರದು. ಎರಡು ಡೋಸ್ ಲಸಿಕೆ ನೀಡಿದ ಬಳಿಕವೇ ಆಫ್‌ಲೈನ್ ತರಗತಿ ಹಾಗೂ ಪರೀಕ್ಷೆ ನಡೆಸಬೇಕು ಎಂದು ಕುಲಪತಿಗೆ ಮನವಿ ಪತ್ರ ಸಲ್ಲಿಸಿದರು.

ಈ ವೇಳೆ ಸಂಂಸ್ಥೆಯ ಜಿಲ್ಲಾ ಘಟಕದ ಅಧ್ಯಕ್ಷಎಸ್.ಎಚ್.ಹಣಮಂತ ಮಾತನಾಡಿ, ‘ತಿಂಗಳಿಂದ ರಾಜ್ಯದಾದಂತ್ಯ ಸಾವಿರಾರು ವಿದ್ಯಾರ್ಥಿಗಳು ಹೋರಾಟ ಮಾಡುತ್ತಿದ್ದಾರೆ. ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಸೇರಿದಂತೆ ಹಲವು ಸಚಿವರು ಹಾಗೂ ಶಾಸಕರಿಗೆ ಮನವಿ ಪತ್ರ ಸಲ್ಲಿಸಲಾಗಿದೆ. ಗೂಗಲ್ ಫಾರ್ಮ್ ಸಮೀಕ್ಷೆಯಲ್ಲಿ ಸುಮಾರು 50 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿ, ಪರೀಕ್ಷೆಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪೋಷಕರು, ಶಿಕ್ಷಕರು, ವೈದ್ಯರು, ಶಿಕ್ಷಣ ತಜ್ಞರೂ ಧ್ವನಿಗೂಡಿಸಿ 1ಲಕ್ಷಕ್ಕೂ ಹೆಚ್ಚು ಸಹಿ ಮಾಡಿದ್ದಾರೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಹೇಳಿದರು.

ನಿರಂತರ ಹೋರಾಟ ನಡೆಸಿಕೊಂಡು ಬರುತ್ತಿರುವ ವಿದ್ಯಾರ್ಥಿಗಳ ಆತಂಕವನ್ನು ಸರ್ಕಾರ ಅರ್ಥ ಮಾಡಿಕೊಳ್ಳುತ್ತಿಲ್ಲ. ವಿಶ್ವವಿದ್ಯಾಲಯಗಳು ಸಹ ಮೌನವಾಗಿದ್ದು, ಪರೀಕ್ಷೆ ತಯಾರಿಯಲ್ಲಿ ಮುಳುಗಿವೆ. ವಿದ್ಯಾರ್ಥಿಗಳ ಜೀವಗಳನ್ನು ಲೆಕ್ಕಿಸದೇ ಪರೀಕ್ಷೆ ನಡೆಸಬಾರದು. ಕೂಡಲೇ ಹಿಂದಿನ 1, 3, ಮತ್ತು 5ನೇ ಸೆಮಿಸ್ಟರ್ ಪರೀಕ್ಷೆ ರದ್ದುಗೊಳಿಸಬೇಕು. ಮುಂದಿನ 2, 4, ಮತ್ತು 6ನೇ ಸೆಮಿಸ್ಟರ್ ಪರೀಕ್ಷೆಗಳನ್ನು ಎರಡು ಡೋಸ್ ಲಸಿಕೆ ನೀಡಿದ ಬಳಿಕ ನಡೆಸಬೇಕು’ ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಘಟಕದ ಕಾರ್ಯದರ್ಶಿ ಈರಣ್ಣ ಇಸಬಾ, ಉಪಾಧ್ಯಕ್ಷ ಸ್ನೇಹಾ ಕಟ್ಟಿಮನಿ, ಸಮಿತಿ ಸದಸ್ಯರಾದ ಎನ್.ಕೆ ತುಳಜರಾಮ, ಗೌತಮ್, ಅರುಣ್, ರಮೇಶ, ಪ್ರೀತಿ, ಗೋಧಾವರಿ, ಶಿಲ್ಪಾ, ವೆಂಕಟೇಶ ದೇವದುರ್ಗಾ, ಭೀಮು ಆಂದೊಲ, ನಾಗರಾಜ ರಾವೂರ, ಸುನಿಲ ಪೂಜಾರಿ, ಖಲೀಲ್, ಅಕಾಶ, ಹರ್ಷ, ದೇವರಜ್, ಸಾಧನಾ, ಭಾಗ್ಯಶ್ರೀ, ಪವನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.