ಗುರುವಾರ , ಆಗಸ್ಟ್ 18, 2022
25 °C

ತೀಸ್ತಾ ಬಂಧನ ಖಂಡನೀಯ: ಎಚ್.ವಿ.ದಿವಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ‘ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್‌ವಾಡ್‌ ಅವರನ್ನು ಗುಜರಾತ್‌ ಭಯೋತ್ಪಾದನೆ ನಿಗ್ರಹ ದಳವು (ಎಟಿಎಸ್‌)  ವಶಕ್ಕೆ ಪಡೆದುಕೊಂಡಿರುವುದು ಖಂಡನೀಯ’ ಎಂದು ಸೋಷಲಿಸ್ಟ್‌ ಯುನಿಟಿ ಸೆಂಟರ್‌ ಆಪ್‌ ಇಂಡಿಯಾ (ಎಸ್‌ಯುಸಿಐ) ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಚ್.ವಿ.ದಿವಾಕರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಗುಜರಾತಿನಲ್ಲಿ ಈ ಹಿಂದೆ ನಡೆದ ಗಲಭೆ ಪ್ರಕರಣಗಳಲ್ಲಿ ನರೇಂದ್ರ ಮೋದಿ ಅವರು ನಿರಾಪರಾಧಿ ಎಂದು ನ್ಯಾಯಾಲಯ ಅವರನ್ನು ಖುಲಾಸೆ ಮಾಡಿದೆಯಾದರೂ, ದೇಶದ ಜನರ ಆತ್ಮಸಾಕ್ಷಿ ನ್ಯಾಯಾಲಯದಲ್ಲಿ ಮೋದಿಯವರು ಎಂದಿಗೂ ಅಪರಾಧಿ ಸ್ಥಾನದಲ್ಲಿಯೇ ಉಳಿಯಲಿದ್ದಾರೆ‘ ಎಂದಿದ್ದಾರೆ.

‘ಸೇಡಿನ ಕ್ರಮವಾಗಿ ಗುಜರಾತ್ ಬಿಜೆಪಿ ಸರ್ಕಾರವು ಮಾನವ ಹಕ್ಕುಗಳ ಹೋರಾಟಗಾರರಾದ ತೀಸ್ತಾ ಸೆಟಲ್‌ವಾಡ್‌ ಮತ್ತಿತರನ್ನು  ಅಕ್ರಮವಾಗಿ ಬಂಧಿಸಿರುವುದು ಸರಿಯಲ್ಲ. ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು