ಶುಕ್ರವಾರ, 29 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಡಾ.ಅಜಯ್ ಸಿಂಗ್ ಮನೆಯ ಆವರಣದಲ್ಲಿ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಶವ ಪತ್ತೆ

Published 24 ಆಗಸ್ಟ್ 2023, 7:43 IST
Last Updated 24 ಆಗಸ್ಟ್ 2023, 7:43 IST
ಅಕ್ಷರ ಗಾತ್ರ

ಕಲಬುರಗಿ: ಇಲ್ಲಿನ ಶರಣನಗರದಲ್ಲಿನ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ (ಕೆಕೆಆರ್‌ಡಿಬಿ) ಅಧ್ಯಕ್ಷರೂ ಆಗಿರುವ ಶಾಸಕ ಡಾ. ಅಜಯ್ ಸಿಂಗ್ ಅವರ ನಿವಾಸದ ಆವರಣದಲ್ಲಿ ‌ಗುರುವಾರ ಮರಕ್ಕೆ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಡಾ. ಅಜಯ್ ಸಿಂಗ್ ಅವರ ಮನೆಯ ವಾಚ್‌ಮ್ಯಾನ್ ಆಗಿದ್ದ ದೇವೇಂದ್ರ(32) ಎಂಬುವವರ ಶವ ಪತ್ತೆಯಾಗಿದೆ.

ತಾಲ್ಲೂಕಿನ ಪಟ್ಟಣ ಗ್ರಾಮದ ನಿವಾಸಿಯಾದ ದೇವೇಂದ್ರ ಅವರು ನಾಲ್ಕೈದು ವರ್ಷಗಳಿಂದ ಡಾ.ಅಜಯ್ ಸಿಂಗ್ ಅವರ ಮನೆಯಲ್ಲಿ ವಾಚ್‌ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗುತ್ತಿದೆ.

ಬುಧವಾರ ತಡ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಗುರುವಾರ ಬೆಳಿಗ್ಗೆ ಅಜಯ್ ಸಿಂಗ್ ಅವರ ಮನೆಯ ಅಡುಗೆ ತಯಾರಕ ಮರದಲ್ಲಿನ ಶವ ಕಂಡು ಪೊಲೀಸರಿಗೆ ಮಾಹಿತಿ ನೀಡಿದರು ಎಂದು ಸ್ಥಳೀಯರು ಹೇಳಿದ್ದಾರೆ.

ಸ್ಥಳಕ್ಕೆ ಬ್ರಹ್ಮ‌ಪೂರ‌ ಪೊಲೀಸರು ಭೇಟಿ ಪರಿಶೀಲಿಸಿದರು. ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯ್ ಸಿಂಗ್ ಅವರು ಪ್ರಸ್ತುತ ಬೆಂಗಳೂರಿನಲ್ಲಿ ಇದ್ದಾರೆ.

ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT