ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಮಲಾಪುರ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

Published 4 ಜೂನ್ 2023, 12:19 IST
Last Updated 4 ಜೂನ್ 2023, 12:19 IST
ಅಕ್ಷರ ಗಾತ್ರ

ಕಮಲಾಪುರ (ಕಲಬುರಗಿ ಜಿಲ್ಲೆ): ತಾಲ್ಲೂಕಿನ ಜೀವಣಗಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ವ್ಯಕ್ತಿಯೊಬ್ಬರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ವೆಂಕಟರಾವ ಧರ್ವೆ (45) ಆತ್ಮಹತ್ಯೆ ಮಾಡಿಕೊಂಡವರು.

ಜೀವಣಗಿಯಲ್ಲಿನ ಮನೆಯಲ್ಲಿ ವೆಂಕಟರಾವ್ ಒಬ್ಬರೇ ವಾಸಿಸುತ್ತಿದ್ದರು. ರಾತ್ರಿ 8ಕ್ಕೆ ಪುತ್ರ ಮನೀಷ್ ಅವರಿಗೆ ವಿಡಿಯೊ ಕಾಲ್ ಮಾಡಿ ಮಾತನಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ತಿಳಿಸಿ ಫೋನ್ ಕಟ್ ಮಾಡಿದ್ದರು. ಮುಂಬೈನಲ್ಲಿದ್ದ ಮನೀಷ್ ಜೀವಣಗಿಯಲ್ಲಿನ ತಮ್ಮ ಪಕ್ಕದ ಮನೆಯವರಿಗೆ ವಿಷಯ ತಿಳಿಸಿದ್ದಾರೆ. ಅವರು ತೆರಳಿ ನೋಡುವಷ್ಟರಲ್ಲಿ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಾಗಿಲಿಗೆ ಒಳಗಿನಿಂದ ಚಿಲಕ ಹಾಕಿದ್ದರಿಂದ ರಕ್ಷಿಸಲು ಆಗಿಲ್ಲ. ಬಾಗಿಲು ಮುರಿದು ನೋಡುವಷ್ಟರಲ್ಲಿ ವೆಂಕಟರಾವ್ ಸುಟ್ಟು ಕರಕಲಾಗಿದ್ದರು.

ವರ್ಷದ ಹಿಂದೆ ಅವರ ತಾಯಿ ತೀರಿಕೊಂಡಿದ್ದರು. 6 ತಿಂಗಳ ಹಿಂದೆ ಮುಂಬೈನಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮೂರು ತಿಂಗಳ ಹಿಂದೆ ತಂದೆ ತೀರಿಕೊಂಡಿದ್ದರು. ಇದರಿಂದ ಮಾನಸಿಕವಾಗಿ ಅಸ್ವಸ್ಥ ಗೊಂಡಿದ್ದ ವೆಂಕಟರಾವ್ ಆತ್ಮಹತ್ಯೆ ಮಾಡಿ ಕೊಂಡಿರಬಹುದೆಂದು ಶಂಕಿಸಲಾಗಿದೆ. ಕಮಲಾಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಅವರಿಗೆ ಮೂವರು ಪುತ್ರರು, ಒಬ್ಬ ಪುತ್ರಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT