ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಜೆಪಿ ಅಭ್ಯರ್ಥಿ ಪರ ಭರದ ಪ್ರಚಾರ

ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ
Published 30 ಮೇ 2024, 6:59 IST
Last Updated 30 ಮೇ 2024, 6:59 IST
ಅಕ್ಷರ ಗಾತ್ರ

ಕಲಬುರಗಿ: ಕರ್ನಾಟಕ ವಿಧಾನ ಪರಿಷತ್ತಿನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣಾ ಕಣ ರಂಗೇರಿದ್ದು, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಪರ ಪ್ರಚಾರ ಕಾರ್ಯ ಚುರುಕು ಪಡೆದಿದೆ.

ಅಮರನಾಥ ಪರ ಮಂಗಳವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಚಾರ ನಡೆಸಿದ್ದರು. ಬುಧವಾರ ಮಾಜಿ ಸಚಿವ ಸುರೇಶಕುಮಾರ್ ನಗರದ ವಿವಿಧೆಡೆ ಅಮರನಾಥ ಪಾಟೀಲ ಪರ ಮತಯಾಚಿಸಿದರು.

ಕಲಬುರಗಿ ಹೈಕೋರ್ಟ್‌ನಲ್ಲಿರುವ ವಕೀಲರ ಸಂಘದಲ್ಲಿ ಬುಧವಾರ ನಡೆದ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಚಿವ ಎಸ್‌.ಸುರೇಶಕುಮಾರ್‌, ‘ಈಶಾನ್ಯ ಕರ್ನಾಟಕದ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಮತ್ತು 371(ಜೆ )ಕಲಂ ಕುರಿತಾಗಿ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತಲು ಬಿಜೆಪಿಯ ಅಭ್ಯರ್ಥಿ ಅಮರನಾಥ ಪಾಟೀಲರ ಗೆಲುವು ಅಗತ್ಯವಾಗಿದೆ’ ಎಂದು ಪ್ರತಿಪಾದಿಸಿದರು.

‘ಕಲ್ಯಾಣ ಭಾಗದ ಏಳು ಜಿಲ್ಲೆಗಳಲ್ಲಿ ಪದವೀಧರರು ತಮ್ಮ ಸಮಸ್ಯೆಗೆ ಸ್ಪಂದಿಸಬಲ್ಲ ಸಮರ್ಥ ಅಭ್ಯರ್ಥಿಯಾಗಿರುವ ಅಮರನಾಥ ಅವರನ್ನು ಬೆಂಬಲಿಸಬೇಕು. ಅಮರನಾಥ ಪಾಟೀಲರು ಯಾವತ್ತೂ ಜನರ ನಡುವೆ ಇದ್ದು ಕೆಲಸ ಮಾಡುವ ವ್ಯಕ್ತಿ. ಅವರು ಚುನಾವಣೆ ಸಂದರ್ಭದಲ್ಲಿ ಮಾತ್ರ ಕೈ ಕುಲುಕುವ ರಾಜಕಾರಣಿ ಅಲ್ಲ’ ಎಂದರು.

ಸಂಸ‌ದ ಡಾ.ಉಮೇಶ ಜಾಧವ ಮಾತನಾಡಿ, ‘ಈಶಾನ್ಯ ಪದವೀಧರ ಕ್ಷೇತ್ರದ ಸಮಗ್ರ ಅಭಿವೃದ್ಧಿಗಾಗಿ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲರನ್ನು ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.

ಇದೇ ವೇಳೆ, ಮಾಜಿ ಸಚಿವ ಸುರೇಶಕುಮಾರ ಹಾಗೂ ಸಂಸದ ಡಾ.ಉಮೇಶ ಜಾಧವ ಅವರನ್ನು ಹೈಕೋರ್ಟ್ ವಕೀಲರ ಸಂಘದಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಗುಪ್ತಲಿಂಗ ಬಿರಾದಾರ, ಧರ್ಮಣ್ಣ ದೊಡ್ಡಮನಿ, ಬಸವರಾಜ ನಾಶಿ, ಶ್ರವಣಕುಮಾರ ಮಠ, ಡಿ.ಧಾರವಾಡಕರ್‌, ವಿದ್ಯಾಸಾಗರ ಕುಲಕರ್ಣಿ, ಬಿ.ಎಸ್‌.ಜಾಲ್ದೆ, ವಿ.ಬಿ.ಕುಲಕರ್ಣಿ, ಕಲ್ಯಾಣಪ್ಪ ವಡಗೇರ, ಜಿ.ಎಸ್‌.ಬಿರಾದಾರ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

ಬಳಿಕ ಸುರೇಶಕುಮಾರ ಹಾಗೂ ಸಂಸದ ಡಾ.ಉಮೇಶ ಜಾಧವ ಅವರು ಜಿಲ್ಲಾ ಕೋರ್ಟ್‌ ಆವರಣದಲ್ಲೂ ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲರ ಪರ ಮತಯಾಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT