ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಂಚೊಳಿ: ಸೂರ್ಯ ನಮಸ್ಕಾರ ಅಭಿಯಾನ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಅಭಿಯಾನ
Last Updated 15 ಜನವರಿ 2022, 7:03 IST
ಅಕ್ಷರ ಗಾತ್ರ

ಚಿಂಚೋಳಿ: ತಾಲ್ಲೂಕಿನ ವಿವಿಧ ಸರ್ಕಾರಿ ಕಚೇರಿಗಳಲ್ಲಿ ಶುಕ್ರವಾರ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಮಾಡಲಾಯಿತು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಇಲ್ಲಿನ ತಾಲ್ಲೂಕು ಆಡಳಿತ ಭವನದ ಮಹಡಿಯ ಮೇಲೆ ಕಚೇರಿಯ ಸಿಬ್ಬಂದಿಗಳು ತಹಶೀಲ್ದಾರ್ ಅಂಜುಮ ತಬಸ್ಸುಮ್ ನೇತೃತ್ವದಲ್ಲಿ ಸೂರ್ಯ ನಮಸ್ಕಾರ ಮಾಡಿದರು.

ಕಾರ್ಯಕ್ರಮದಲ್ಲಿ ಗ್ರೇಡ್-2 ತಹಶೀಲ್ದಾರ್ ವೆಂಕಟೇಶ ದುಗ್ಗನ್, ಶಿರಸ್ತೇದಾರ ರವಿಕುಮಾರ, ಸುಭಾಷ ನಿಡಗುಂದಿ, ಕಂದಾಯ ನಿರೀಕ್ಷಕರಾದ ಕೇಶವಕುಲಕಣಿ, ಜುಬೇರ್, ರವಿ ಪಾಟೀಲ ಹಾಗೂ ಭೀಮರೆಡ್ಡಿ ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಇದ್ದರು.

ಇಲ್ಲಿನ ತಾಲ್ಲೂಕು ಪಂಚಾಯಿತಿ ಕಚೇರಿ ಆವರಣದಲ್ಲಿ ಸಿಬ್ಬಂದಿ, ಇಒ ಅನಿಲಕುಮಾರ ರಾಠೋಡ್ ನೇತೃತ್ವದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ ನಡೆಸಿದರು.

ಚಂದ್ರಕಾಂತ ಕೆರೋಳ್ಳಿ, ಮಲ್ಲಿಕಾರ್ಜುನ ಬೈಗೊಂಡ ಸೇರಿದಂತೆ ಸಿಬ್ಬಂದಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT