ಕಲಬುರಗಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ವತಿಯಿಂದ ಬೆಂಗಳೂರಿನ ಬಸವನಗುಡಿಯಲ್ಲಿ ಈಚೆಗೆ ನಡೆದ 14 ಹಾಗೂ 17 ವರ್ಷದ ಬಾಲಕ–ಬಾಲಕಿಯರ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಇಲ್ಲಿನ ಎಸ್‌ಬಿಆರ್ ಶಾಲೆ ವಿದ್ಯಾರ್ಥಿ ಬಸವ ಪ್ರಸಾದ್ ಪಿ. ಉತ್ತಮ ಸಾಧನೆ ಮಾಡಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
14 ವರ್ಷದ ಬಾಲಕರ ವಿಭಾಗದ 50 ಮೀ. ಬ್ರೆಸ್ಟ್ ಸ್ಟ್ರೋಕ್‌ನಲ್ಲಿ ಬಸವ ಪ್ರಸಾದ್ ಬೆಳ್ಳಿ ಪದಕಕ್ಕೆ ಕೊರಳೊಡ್ಡಿದ್ದಾರೆ.
ಎಸ್‌ಬಿಆರ್ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಬಸವ ಪ್ರಸಾದ್, ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಈಜುಕೊಳದಲ್ಲಿ ಅಭ್ಯಾಸ ಮಾಡುತ್ತಿದ್ದು ಶಾಲಾ ಕ್ರೀಡಾಕೂಟದ ಈಜು ಸ್ಪರ್ಧೆಯಲ್ಲಿ ಕಲಬುರಗಿಯಿಂದ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮೊದಲ ವಿದ್ಯಾರ್ಥಿಯಾಗಿದ್ದಾರೆ.
ವಿದ್ಯಾರ್ಥಿಯ ಸಾಧನೆಗೆ ಶರಣಬಸವೇಶ್ವರ ಸಂಸ್ಥಾನದ 8ನೇ ಮಹಾದಾಸೋಹ ಪೀಠಾಧಿಪತಿ ಶರಣಬಸವಪ್ಪ ಅಪ್ಪ, ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ದಾಕ್ಷಾಯಿಣಿ ಎಸ್.ಅಪ್ಪ, ಕಾರ್ಯದರ್ಶಿ ಬಸವರಾಜ ದೇಶಮುಖ, ಪ್ರಾಚಾರ್ಯ ಎನ್.ಎಸ್.ದೇವರಕಲ್, ಈಜು ತರಬೇತುದಾರರಾದ ಮಚ್ಚೇಂದ್ರಸಿಂಗ್ ಠಾಕೂರ್ ಹಾಗೂ ರೇಣುಕಾ ಬಿರಾದಾರ ಹರ್ಷ ವ್ಯಕ್ತಪಡಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.