ಬೆಂಗಳೂರು: ‘ಕಲಬುರಗಿಯಲ್ಲಿ ತಳವಾರ ಸಮುದಾಯದವರಿಗೆ ಪರಿಶಿಷ್ಟ ಪಂಗಡ (ಎಸ್ಟಿ) ಪ್ರಮಾಣ ಪತ್ರಕ್ಕಾಗಿ ಹೋರಾಟ ನಡೆಸುತ್ತಿದ್ದವರ ಮೇಲೆ ಲಾಠಿ ಪ್ರಹಾರ ಮಾಡಿ ಬಂಧಿಸಿ ಎಫ್ಐಆರ್ ದಾಖಲಿಸಿರುವುದು ಸರಿಯಲ್ಲ. ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಧ್ಯಪ್ರವೇಶಿಸಿ ಕ್ರಮ ಕೈಗೊಳ್ಳಬೇಕು’ ಎಂದು ವಿಧಾನ ಪರಿಷತ್ತಿನ ವಿರೋಧಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ಆಗ್ರಹಿಸಿದ್ದಾರೆ.

ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಳವಾರ ಸಮುದಾಯಕ್ಕೆ ಎಸ್ಟಿ ಪ್ರಮಾಣಪತ್ರ ಕೊಡುತ್ತಿಲ್ಲ ಎಂದು ಆ ಸಮುದಾಯದ ಅನೇಕ ಯುವಕರು, ಮುಖಂಡರು ಪ್ರತಿಭಟನೆ ನಡೆಸುತ್ತಿದ್ದರು. ಅವರ ಮೇಲೆ ಲಾಠಿಪ್ರಹಾರ ನಡೆಸಲಾಗಿದೆ. ಇದೇ ಬೇಡಿಕೆ ಇಟ್ಟುಕೊಂಡು ಬಹಳ ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿದ್ದಾರೆ. ಆದರೂ ಪ್ರಯೋಜನ ಆಗಿಲ್ಲ’ ಎಂದು ದೂರಿದರು.

‘ಮೂರು ತಿಂಗಳ ಹಿಂದೆಯೂ ಇದೇ ವಿಷಯಕ್ಕೆ ಹೋರಾಟ ಆಗಿತ್ತು. ಆಗಲೂ ನಾನು ಭಾಗವಹಿಸಿದ್ದೆ. ಈಗ ಮತ್ತೆ ಹೋರಾಟ ಆರಂಭವಾಗಿದೆ. ರಾತ್ರಿಯೂ ಧರಣಿ ನಡೆಸುತ್ತಿದ್ದಾಗ ಯುವಕರನ್ನು ಬಂಧಿಸಿ ಕರೆದೊಯ್ದು ಬೆಳಿಗ್ಗೆ ಬಿಡುಗಡೆ ಮಾಡಿದ್ದಾರೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಮಾತ್ರ ಹೋರಾಟ ನಡೆಯುತ್ತಿದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಯಾಕೆ ಇಲ್ಲ’ ಎಂದು ಪ್ರಶ್ನಿಸಿದರು.

‘ರಾಜಕೀಯ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ. ಪ್ರಮಾಣಪತ್ರ ಕೊಡುತ್ತಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಹೇಳಿದ್ದಾರೆ. ಹಾಗಾದರೆ ಪ್ರಮಾಣಪತ್ರ ನೀಡುತ್ತಿದ್ದರೆ ಯಾಕೆ ಪ್ರತಿಭಟನೆ ನಡೆಯುತ್ತಿತ್ತು’ ಎಂದು ಅವರು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-34-2087158034

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.