ಕಲಬುರ್ಗಿ: 'ರಾಜ್ಯದಾದ್ಯಂತ ನಗರ- ಸ್ಥಳೀಯ ಸಂಸ್ಥೆಗಳಲ್ಲಿ ಶೇಕಡ 20ರಷ್ಟು ತೆರಿಗೆ ಬಾಕಿ ಇದೆ. ನಿಗದಿತ ಅವಧಿಯಲ್ಲಿ ತೆರಿಗೆ ವಸೂಲಾತಿಗೆ ಕ್ರಮ ವಹಿಸದಿದ್ದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರವಾಗಿ ಹೊಣೆಗಾರನ್ನಾಗಿ ಮಾಡಲಾಗುವುದು' ಎಂದು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಎಚ್ಚರಿಕೆ ನೀಡಿದರು.

'ಈ ಸಂಬಂಧ ಕೆಳ ಹಂತದ ಸಿಬ್ಬಂದಿಗೆ ಹೆಚ್ಚಿನ ಕಾಳಜಿ ವಹಿಸಿ ತೆರಿಗೆ ವಸೂಲಾತಿಗೆ ಅಧಿಕಾರಿಗಳು ಸೂಕ್ತ ನಿರ್ದೇಶನ ನೀಡಬೇಕು' ಎಂದರು.

'ಈ ಬಾರಿ ವಾಡಿಕೆ ಮಳೆಯಾಗದ ಕಾರಣ ನಗರ–ಸ್ಥಳೀಯ ಸಂಸ್ಥೆಗಳಲ್ಲಿ ಕುಡಿಯುವ ನೀರಿನ ತೊಂದರೆ ಎದುರಾಗಿದೆ. ಇದನ್ನು ತಪ್ಪಿಸಲು ಪಟ್ಟಣ ಪ್ರದೇಶಗಳಲ್ಲಿ ಅಂತರ್ಜಲ ಹೆಚ್ಚಿಸಲು ಇಲಾಖೆಯಿಂದ ಯೋಜನೆ ಹಾಕಿಕೊಳ್ಳಲಾಗುವುದು. ಕುಡಿಯುವ ನೀರು ಪೂರೈಕೆ ಕುರಿತಂತೆ ಸ್ಥಳೀಯ ಸಂಸ್ಥೆಗಳ ಜೊತೆ ಜಲಮಂಡಳಿಯು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಲಾಗುವುದು' ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಮೈತ್ರಿ ಸರ್ಕಾರಕ್ಕೆ ಏನೂ ಧಕ್ಕೆ ಇಲ್ಲ:'ಶಾಸಕರ ರಾಜೀನಾಮೆ ಅವರ ವೈಯಕ್ತಿಕ ವಿಚಾರ. ಅದಕ್ಕೂ ಸರ್ಕಾರಕ್ಕೂ ಸಂಬಂಧ ಇಲ್ಲ. ನಾವು ಐದು ವರ್ಷ ಪೂರೈಸುತ್ತೇವೆ' ಎಂದು ಸಚಿವ ಖಾದರ್ ಪ್ರತಿಕ್ರಿಯಿಸಿದರು.

ಶಾಸಕರ ರಾಜೀನಾಮೆ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, 'ಕುಮಾರಸ್ವಾಮಿ ನೇತೃತ್ವದ ಕಾಂಗ್ರೆಸ್–ಜೆಡಿಎಸ್ ಮೈತ್ರಿ ಸರ್ಕಾರ ಸುಭದ್ರವಾಗಿದ್ದು, ಐದು ವರ್ಷ ಆಡಳಿತ ನಡೆಸಲಿದೆ. ಇದರಲ್ಲಿ ಯಾವುದೇ ಅನುಮಾನ ಬೇಡ' ಎಂದರು.

‘ಐ.ಎಂ.ಎ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತನಿಖೆಗೆ ಎಸ್.ಐ.ಟಿ. ತಂಡ ರಚಿಸಿದ್ದು, ತನಿಖೆ ಪ್ರಗತಿಯಲ್ಲಿದೆ. ರಾಜ್ಯದ ಪೊಲೀಸ್ ಅಧಿಕಾರಿಗಳ ಮೇಲೆ ಸಂಪೂರ್ಣ ವಿಶ್ವಾಸವಿದ್ದು, ಪಾರದರ್ಶಕವಾಗಿ ತನಿಖೆ ಕೈಗೊಂಡು ಸತ್ಯಾಸತ್ಯತೆ ಬಯಲಿಗೆ ಬರಲಿದೆ. ಹೀಗಾಗಿ ಪ್ರಕರಣ ಸಿ.ಬಿ.ಐ.ಗೆ ವಹಿಸಬೇಕೆಂಬ ವಿರೋಧ ಪಕ್ಷದವರ ಬೇಡಿಕೆ ಅಪ್ರಸ್ತುತ’ ಎಂದು ಹೇಳಿದರು.

₹ 10.50 ಕೋಟಿ ತೆರಿಗೆ ಸಂಗ್ರಹ: ಸಮಾಜ ಕಲ್ಯಾಣ ಹಾಗೂ ಕಲಬುರ್ಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಮಾತನಾಡಿ. ಕಲಬುರ್ಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 6 ತಿಂಗಳಲ್ಲಿ ಹೆಚ್ಚಿನ ಮುತುವರ್ಜಿ ವಹಿಸಿದ ಪರಿಣಾಮ ₹ 10.50 ಕೋಟಿ ತೆರಿಗೆಯನ್ನು ಸಂಗ್ರಹಿಸಲಾಗಿದೆ. ಪಾಲಿಕೆ ಇತಿಹಾಸದಲ್ಲಿಯೇ ಕಡಿಮೆ ಅವಧಿಯಲ್ಲಿ ಹೆಚ್ಚಿನ ಕರ ವಸೂಲಾತಿ ಇದಾಗಿದೆ’ ಎಂದರು.

‘ಪಾಲಿಕೆ ವ್ಯಾಪ್ತಿಯಲ್ಲಿ ಕರ ವಸೂಲಾತಿ ಸಂಗ್ರಹಣಕ್ಕೆ ಇಡಿಸಿ ಸ್ವೈಪ್ ಮಷಿನ್ ಸಾಫ್ಟ್ವೇರ್ ಅಭಿವೃದ್ಧಿಪಡಿಸಲಾಗಿದ್ದು. ಕೆಲವು ವಾರ್ಡುಗಳಲ್ಲಿ ಪ್ರಾಯೋಗಿಕವಾಗಿ ಜಾರಿಯಲ್ಲಿದೆ. ಮುಂದಿನ 2 ವಾರಗಳಲ್ಲಿ ಎಲ್ಲಾ ವಾರ್ಡುಗಳಲ್ಲಿ ಪಾಲಿಕೆಯ ಸಿಬ್ಬಂದಿ ಇಡಿಸಿ ಮಷಿನ್ ಮೂಲಕ ಮನೆ–ಮನೆಗೆ ತೆರಳಿ ಸ್ಥಳದಲ್ಲಿಯೆ ಕರ ವಸೂಲಾತಿ ಮಾಡಲಿದ್ದಾರೆ’ ಎಂದು ವಿವರಿಸಿದರು.

ನಗರದಲಿ ಹಿಂದೆಲ್ಲ ಮಳೆ ಬಂದರೆ ಸಂಚಾರ ಅಸ್ಥವ್ಯಸ್ತವಾಗುವುದನ್ನು ಕಂಡಿದ್ದೇವೆ. ಇನ್ನು ಮುಂದೆ ಹೀಗಾಗದಂತೆ ಪಾಲಿಕೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿಲಾಗಿದೆ. ಪರಿಣಾಮ ಇತ್ತೀಚೆಗೆ ಮಳೆ ಬಿದ್ದ ತಕ್ಷಣ ಪಾಲಿಕೆಯ ಸ್ವಚ್ಛತಾ ತಂಡ ಕೂಡಲೇ ಒಳಚರಂಡಿ ಸ್ವಚ್ಛತೆಗೆ ಅಣಿಯಾಗಿತ್ತು. ಇದರಿಂದ ಚರಂಡಿಯಲ್ಲಿ ನೀರು ಸರಾಗವಾಗಿ ಸಾಗಿ ಸಾರ್ವಜನಿಕರ ರಸ್ತೆ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಕಲಬುರ್ಗಿ ನಗರದಲ್ಲಿನ ಕುಡಿಯುವ ನೀರಿಗಾಗಿ ಸಮಾಜ ಕಲ್ಯಾಣ ಇಲಾಖೆಯಿಂದ ₹ 30 ಕೋಟಿ ಅನುದಾನ ಒದಗಿಸಲಾಗಿದೆ ಎಂದು ಖರ್ಗೆ ಹೇಳಿದರು.

ಕಲಬುರ್ಗಿ ದಕ್ಷಿಣ ಶಾಸಕಿ ಖನೀಜ್ ಫಾತಿಮಾ, ವಿಧಾನ ಪರಿಷತ್ ಸದಸ್ಯ ತಿಪ್ಪಣಪ್ಪ ಕಮಕನೂರ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಗದೇವ ಗುತ್ತೇದಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.