ಸೋಮವಾರ, 9 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಲಬುರಗಿ | ಶಾಲೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಶಿಕ್ಷಕ ಬಂಧನ

Published 14 ಆಗಸ್ಟ್ 2024, 5:13 IST
Last Updated 14 ಆಗಸ್ಟ್ 2024, 5:13 IST
ಅಕ್ಷರ ಗಾತ್ರ

ಕಲಬುರಗಿ: ಆಳಂದ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಯೊಂದರ 10 ವರ್ಷದ ಐದನೇ ತರಗತಿಯ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪದಲ್ಲಿ ಶಾಲಾ ಶಿಕ್ಷಕ ಮಲ್ಲಿಕಾರ್ಜುನನ್ನು ಆಳಂದ ಪೊಲೀಸರು ಬಂಧಿಸಿದ್ದಾರೆ.

ಮಧ್ಯಾಹ್ನ ಬಿಸಿಯೂಟ ಮಾಡಿದ ಬಳಿಕ ಬಾಲಕಿ ಶಾಲಾ ಕೋಣೆಗೆ ತೆರಳಿದಳು. ಶಾಲಾ ಕೋಣೆಯ ಬಾಗಿಲು ಹಾಕಿ ಒಳಗೆ ಬಂದ ಶಿಕ್ಷಕ ಮಲ್ಲಿಕಾರ್ಜುನ, ಬಾಲಕಿಯಿಂದ ಕಿಟಕಿಗಳನ್ನು ಮುಚ್ಚಿಸಿದ. ಆ ಬಳಿಕ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ. ಬಾಲಕಿ ಚೀರಾಡುತ್ತಿದ್ದಂತೆ ಅಲ್ಲಿಂದ ಓಡಿ ಹೋದ ಎಂದು ಪೊಲೀಸರು ತಿಳಿಸಿದ್ದಾರೆ.

ಗಾಬರಿಗೊಂಡ ವಿದ್ಯಾರ್ಥಿನಿ ತನ್ನ ತಂಗಿಯೊಂದಿಗೆ ಮನೆಗೆ ಹೋಗಿ, ಪೋಷಕರಿಗೆ ನಡೆದ ಘಟನೆಯನ್ನು ತಿಳಿಸಿದ್ದಳು. ಪೋಷಕರು ಮುಖ್ಯಶಿಕ್ಷಕರ ಗಮನಕ್ಕೆ ತಂದ ಬಳಿಕ ದೂರು ನೀಡಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT